ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರೀಕ್ಷೆಗಳು ಹುಸಿಯಾದಾಗ ಅಸಮಾಧಾನ ಸಹಜ‌: ಎಚ್‌.ಡಿ. ಕುಮಾರಸ್ವಾಮಿ

Last Updated 24 ಡಿಸೆಂಬರ್ 2018, 8:58 IST
ಅಕ್ಷರ ಗಾತ್ರ

ಬಾಗಲಕೋಟೆ: ಮಂತ್ರಿ ಸ್ಥಾನದ ನಿರೀಕ್ಷೆಗಳು ಹುಸಿಯಾಗಿ ನಿರಾಶೆಯಾದಾಗ ಅಸಮಾಧಾನ ಆಗುವುದು ಸಹಜ‌. ಇಂದಿನ ರಾಜಕಾರಣದಲ್ಲಿ ಅದೆಲ್ಲವೂ ಸಾಮಾನ್ಯ. ಆದರೆ ಎಲ್ಲದಕ್ಕೂ ಕಾಲವೇ ಉತ್ತರ ಹೇಳಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಇಲ್ಲಿನ ತೋಟಗಾರಿಕೆ ವಿಶ್ವವಿದ್ಯಾಲಯದ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಅತೃಪ್ತಿ ನಂತರ ಶಾಸಕ ರಮೇಶ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯಿಸಿದರು.

‘ರಮೇಶ ನನ್ನ ಆತ್ಮೀಯ ಸ್ನೇಹಿತ. ರಾಮಲಿಂಗಾರೆಡ್ಡಿ ಅವರೊಂದಿಗೂ ಮಾತಾಡಿರುವೆ. ಅಸಮಾಧಾನ ಸರಿಪಡಿಸುವ ಸಾಮರ್ಥ್ಯ ಕಾಂಗ್ರೆಸ್ ಪಕ್ಷದ ನಾಯಕರಿಗೂ ಇದೆ’ಎಂದರು.

ಸಂಪುಟ ವಿಸ್ತರಣೆ ಬಗ್ಗೆ ನಮ್ಮ ಪಕ್ಷದ ಶಾಸಕರಲ್ಲಿ ಯಾರಿಗೂ ಅಸಮಾಧಾನವಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಮುಂದಿನ ತಿಂಗಳು ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿದರು.

ರಾಜ್ಯದಲ್ಲಿ ಕಳೆದ ಏಳೆಂಟು ವರ್ಷಗಳಿಂದ ಅಕ್ರಮ ಮರಳು ದಂಧೆ ನಡೆದಿದೆ. ಅದಕ್ಕೆ ತಡೆ ಹಾಕಲು ನಮ್ಮ ಸರ್ಕಾರ ಬದ್ಧವಾಗಿದೆ. ರಾಯಚೂರು ಜಿಲ್ಲೆಯಲ್ಲಿ ಮರಳು ದಂಧೆಕೋರರು ಅಧಿಕಾರಿಯನ್ನು ಕೊಲೆ ಮಾಡಿರುವ ಸಂಗತಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಯಾವುದೇ ಪ್ರಭಾವಕ್ಕೆ ಜಗ್ಗದೇ ಕಟ್ಟುನಿಟ್ಟಿನ ಕ್ರಮಕ್ಕೆ ಅಲ್ಲಿನ ಎಸ್ಪಿಗೆ ಸೂಚನೆ ನೀಡಿರುವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT