ಭಾನುವಾರ, ಏಪ್ರಿಲ್ 5, 2020
19 °C

ಉತ್ತರ ಕರ್ನಾಟಕಕ್ಕೆ ಅನ್ಯಾಯ ಚರ್ಚೆ ಆಗಲಿ: ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು:‘ಮಾತೆತ್ತಿದರೆ ಉತ್ತರಕರ್ನಾಟಕ... ಉತ್ತರಕರ್ನಾಟಕ ಎನ್ನುತ್ತೀರಿ. ಈವರೆಗೆ ಆ ಭಾಗಕ್ಕೆ ಎಷ್ಟು ಹಣ ನೀಡಲಾಗಿದೆ ಎಂಬ ಬಗ್ಗೆ ಚರ್ಚೆ ಆಗಲಿ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ರೇಗಿದರು.

ಮೈತ್ರಿ ಸರ್ಕಾರದಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಅನುದಾನ ಹಂಚಿಕೆಯಲ್ಲಿ ಅನ್ಯಾಯ ಆಗಿದೆ ಎಂದು ಬಿಜೆಪಿಯ ಬಸನಗೌಡ ಪಾಟೀಲ ಯತ್ನಾಳ ಹೇಳಿದಾಗ ಕುಮಾರಸ್ವಾಮಿ ಸಿಟ್ಟಿಗೆದ್ದರು.

‘ನಿಮ್ಮ ಭಾಗಕ್ಕೆ ಕೊಟ್ಟಷ್ಟು ಹಣ ಬೇರೆ ಕಡೆಗೆ ಕೊಟ್ಟಿಲ್ಲ. ಇಲ್ಲಿ ಉತ್ತರ, ಮಧ್ಯ ಮತ್ತು ದಕ್ಷಿಣ ಕರ್ನಾಟಕ ಎಂಬ ತಾರತಮ್ಯ ಬೇಕಿಲ್ಲ. ಸಮಗ್ರ ಕರ್ನಾಟಕದ ಬಗ್ಗೆ ಮಾತನಾಡಬೇಕು. ನೀರಾವರಿಗೆ ಆ ಭಾಗಕ್ಕೆ ಯಾವಾಗ ಎಷ್ಟು ಹಣ ಬಿಡುಗಡೆ ಆಗಿದೆ ಎಂಬುದು ಗೊತ್ತಿಲ್ಲವೆ’ ಎಂದು ಪ್ರಶ್ನಿಸಿದರು.

ಕರ್ನಾಟಕ ಏಕೀಕರಣ ಆದ ದಿನದಿಂದ ರಾಜ್ಯದ ಯಾವ ಭಾಗಕ್ಕೆ ಎಷ್ಟು ಹಣಕ್ಕೆ ಬಿಡುಗಡೆ ಮಾಡಲಾಗಿದೆ ಎಂಬ ಬಗ್ಗೆ ಸರ್ಕಾರ ಶ್ವೇತಪತ್ರ ಹೊರಡಿಸಲಿ. ಆಲಮಟ್ಟಿ ಜಲಾಶಯ ನಿರ್ಮಾಣಕ್ಕೆ ನೀಡಿದ ಹಣದ ಬಗ್ಗೆಯೂ ಚರ್ಚೆ ಆಗಲಿ ಎಂದು ಅವರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು