ರಾಜಕೀಯ ಬೆಳವಣಿಗೆ ಹಿನ್ನೆಲೆ ಮುಖ್ಯಮಂತ್ರಿ ಭೇಟಿ ರದ್ದು 

7

ರಾಜಕೀಯ ಬೆಳವಣಿಗೆ ಹಿನ್ನೆಲೆ ಮುಖ್ಯಮಂತ್ರಿ ಭೇಟಿ ರದ್ದು 

Published:
Updated:

ಹಿರೇಕೆರೂರ (ಹಾವೇರಿ ಜಿಲ್ಲೆ): ಶಾಸಕ ಬಿ. ಸಿ. ಪಾಟೀಲ ಪುತ್ರಿ ಸೃಷ್ಟಿ ಪಾಟೀಲ ಮದುವೆ ಆರತಕ್ಷತೆ ಅಂಗವಾಗಿ ಹಿರೇಕೆರೂರ ಪಟ್ಟಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪ್ರವಾಸ ಕಾರ್ಯಕ್ರಮ ರದ್ದಾಗಿದೆ. 

ಜಿಲ್ಲೆಯ ಹಾವೇರಿ ತಾಲ್ಲೂಕಿನ ನರಸೀಪುರದಲ್ಲಿನ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದ ಶರಣ ಸಂಸ್ಕೃತಿ ಉತ್ಸವದಲ್ಲಿ ಜ. 15 ರಂದು ಅವರು ಪಾಲ್ಗೊಳ್ಳಬೇಕಿತ್ತು. ಆದರೆ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಅವರ ಪ್ರವಾಸ ರದ್ದಾಗಿತ್ತು. ಒಂದು ವಾರದಲ್ಲಿ ಎರಡು ಬಾರಿ ಸಿ. ಎಂ. ಜಿಲ್ಲಾ ಪ್ರವಾಸ ರದ್ದಾಗಿದೆ.

ಬಿಜೆಪಿ ಬರ ಪ್ರವಾಸ ಮುಂದೂಡಿಕೆ
ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯುಡಿಯೂರಪ್ಪ ಅವರು ತುಮಕೂರಿಗೆ ಭೇಟಿ ನೀಡಿದ್ದಾರೆ. ಆದ ಕಾರಣಕ್ಕೆ ಎರಡು ದಿನಗಳ ಬರಪೀಡಿತ ಪ್ರದೇಶಗಳ ಪ್ರವಾಸವನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಪಕ್ಷದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 
 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !