ಆಷಾಢ ಶುಕ್ರವಾರದಲ್ಲಿ ಚಾಮುಂಡಿ ಮೊರೆ‌ ಹೋದ ರೇವಣ್ಣ

ಶುಕ್ರವಾರ, ಜೂಲೈ 19, 2019
24 °C

ಆಷಾಢ ಶುಕ್ರವಾರದಲ್ಲಿ ಚಾಮುಂಡಿ ಮೊರೆ‌ ಹೋದ ರೇವಣ್ಣ

Published:
Updated:

ಮೈಸೂರು: ಸರ್ಕಾರ ಉಳಿಸಿಕೊಳ್ಳಲು ಸಚಿವ ಎಚ್‌.ಡಿ. ರೇವಣ್ಣ ಇಲ್ಲಿನ ಚಾಮುಂಡಿಬೆಟ್ಟಕ್ಕೆ ಬೆಟ್ಟಕ್ಕೆ ಶುಕ್ರವಾರ ಭೇಟಿ ನೀಡಿ, ಚಾಮುಂಡೇಶ್ವರಿ ಮೊರೆ ಹೋದರು‌. ಸುಮಾರು 20 ನಿಮಿಷಗಳ ಕಾಲ ದೇವರ ವಿಗ್ರಹದ ಮುಂದೆ ಕುಳಿತ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೆಸರಲ್ಲಿ ಸಂಕಲ್ಪ ಪೂಜೆ ನೆರವೇರಿಸಿದರು. 

ಚಾಮುಂಡೇಶ್ವರಿ ದರ್ಶನ ಪಡೆದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಎಚ್‌.ಡಿ.ರೇವಣ್ಣ, ‘ಕುಮಾರಸ್ವಾಮಿ ಅವರಿಗೆ ದೇವರು ಆಶೀರ್ವಾದ ಮಾಡಿ ಕೊಟ್ಟಿರುವ ಸರ್ಕಾರ ಇದು. ಏನು ಮಾಡಿದ್ರೂ ಬಿದ್ದು ಹೋಗಲ್ಲ. ಉಳಿಯುತ್ತೆ’ ಎಂದು ಆತ್ಮವಿಶ್ವಾಸ ಪ್ರದರ್ಶಿಸಿದರು. ‘ನಮ್ಮ ಬಗ್ಗೆ ಮಾತನಾಡಿಲ್ಲ ಅಂದ್ರೆ ಕೆಲವರಿಗೆ ಊಟ ಸೇರಲ್ಲ’ ಎಂದು ಆಕ್ಷೇಪಿಸಿದರು

ದೇವರ ಆಶೀರ್ವಾದ  ಇರುವವರಗೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿರ್ತಾರೆ. ಚಾಮುಂಡೇಶ್ವರಿಯ ಅನುಗ್ರಹ ಕುಮಾರಸ್ವಾಮಿ ಮೇಲಿದೆ . ಸದ್ಯಕ್ಕೆ ಸರ್ಕಾರಕ್ಕೆ ಏನು ತೊಂದರೆ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಾ.ರಾ ಮಹೇಶ್ ಬಿಜೆಪಿ ನಾಯಕರನ್ನ ಭೇಟಿ ಮಾಡಿರೋ ವಿಚಾರ ನನಗೆ ಗೊತ್ತಿಲ್ಲ ಬಿಜೆಪಿ ಜೊತೆ ಅಧಿಕಾರ ಹಂಚಿಕೊಳ್ಳುವ ಬೆಳವಣಿಗೆ ಸದ್ಯಕ್ಕಿಲ್ಲ. ಇಂದಿನ ಅಧಿವೇಶನ ಕೂಡ ಸುಸೂತ್ರವಾಗಿ ನಡೆಯುತ್ತದೆ . ಇನ್ಮುಂದೆ ಎಲ್ಲವು ದೇವರ ಮಯ ಎಂದರು.

 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 1

  Sad
 • 0

  Frustrated
 • 3

  Angry

Comments:

0 comments

Write the first review for this !