ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪ ಚುನಾವಣೆಯಲ್ಲಿ ಅನರ್ಹರಿಗೆ ತಕ್ಕಪಾಠ: ಎಚ್‌ಡಿಕೆ

ಸೋಮವಾರಪೇಟೆಯಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಮಾಜಿ ಸಿಎಂ
Last Updated 20 ನವೆಂಬರ್ 2019, 16:15 IST
ಅಕ್ಷರ ಗಾತ್ರ

ಕುಶಾಲನಗರ: ‘ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲೂ ಅನರ್ಹ ಶಾಸಕರಿಗೆ ಸರಿಯಾದ ಪಾಠ ಕಲಿಸಬೇಕಿದೆ’ ಎಂದು ಮಾಜಿ ಮುಖ್ಯಮಂತ್ರಿ ಎಸ್‌.ಡಿ.ಕುಮಾರಸ್ವಾಮಿ ಹೇಳಿದರು.

ಕೊಡಗು ಜಿಲ್ಲೆ, ಸೋಮವಾರಪೇಟೆ ತಾಲ್ಲೂಕಿನ ಗುಡ್ಡೆಹೊಸೂರಿಗೆ ಬುಧವಾರ ಖಾಸಗಿ ಭೇಟಿ ನೀಡಿದ್ದ ಅವರು ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿ, ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಕ್ಷಾಂತರ ನಿಷೇಧ ಕಾಯ್ದೆಗೆ ಶಕ್ತಿ ಇಲ್ಲದಂತಾಗಿದೆ. ಒಂದು ಪಕ್ಷದಿಂದ ಗೆದ್ದು ಬಳಿಕ ರಾಜೀನಾಮೆ ನೀಡಿ ಯಾವ ಪಕ್ಷಕ್ಕೆ ಬೇಕಾದರೂ ಹೋಗಬಹುದು ಎನ್ನುವಂತ ಸ್ಥಿತಿ ನಿರ್ಮಾಣವಾಗಿದೆ’ ಎಂದು ಹೇಳಿದರು.

‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಮಗೆ ಯಾರ ಬೆಂಬಲವೂ ಅಗತ್ಯವಿಲ್ಲ ಎಂದಿದ್ದಾರೆ. ಮೂರು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಅಂದು ಹೇಳಿದ್ದಾರೆ. ಆದರೆ, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗಿಂತಲೂ ಜೆಡಿಎಸ್ ಹೆಚ್ಚು ಸ್ಥಾನ ಗೆಲ್ಲಲಿದೆ. ಆಗ ಸರ್ಕಾರದ ಅಳಿವು– ಉಳಿವು ಗೊತ್ತಾಗಲಿದೆ’ ಎಂದು ಹೇಳಿದರು.

‘ಉಪ ಚುನಾವಣೆ ಫಲಿತಾಂಶದ ನಂತರ ಎಲ್ಲರೂ ನಮ್ಮ ಬಳಿಗೇ ಬರಬೇಕು. ಫಲಿತಾಂಶದ ಬಳಿಕ ಎಲ್ಲವೂ ನಿರ್ಧಾರವಾಗಲಿದೆ. ಉಪ ಚುನಾವಣೆಯನ್ನು ಜೆಡಿಎಸ್‌ ಗಂಭೀರವಾಗಿ ಗಂಭೀರವಾಗಿ ಪರಿಗಣಿಸಿದೆ. ಹದಿನೈದು ಕ್ಷೇತ್ರಗಳಿಗೂ ಉತ್ತಮ ಅಭ್ಯರ್ಥಿಯನ್ನು ಹಾಕಿದ್ದೇವೆ. ಹಿರೇಕೆರೂರು ಕ್ಷೇತ್ರದಲ್ಲಿ ಕಬ್ಬಿಣಕಂಥಿ ಮಠದ ಶಿವಲಿಂಗ ಸ್ವಾಮೀಜಿಯನ್ನು ಅಭ್ಯರ್ಥಿ ಮಾಡಲಾಗಿತ್ತು. ಇದರಿಂದ ಅನರ್ಹರಿಗೆ ಸೋಲುವ ಭೀತಿ ಕಾಡಿತ್ತು. ಹೀಗಾಗಿ, ನಾಮಪತ್ರ ವಾಪಸ್‌ ಪಡೆಯುವಂತೆ ಸ್ವಾಮೀಜಿ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಕುಮಾರಸ್ವಾಮಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT