ಶುಕ್ರವಾರ, ಜುಲೈ 30, 2021
27 °C

ಕೊಡಗಿನ ರೆಸಾರ್ಟ್‌ನಲ್ಲಿ ಎಚ್‌ಡಿಕೆ ವಾಸ್ತವ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ಹೊರವಲಯದ ತಾಜ್‌ ರೆಸಾರ್ಟ್‌ನಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಕುಟುಂಬಸ್ಥರೊಂದಿಗೆ ವಾಸ್ತವ್ಯ ಮಾಡಿದ್ದಾರೆ.

ಶುಕ್ರವಾರ ಮಧ್ಯಾಹ್ನ ಆಗಮಿಸಿರುವ ಕುಮಾರಸ್ವಾಮಿ ಅವರು ಭಾನುವಾರದ ವರೆಗೂ ರೆಸಾರ್ಟ್‌ನಲ್ಲೇ ತಂಗಲಿದ್ದಾರೆ. ಅವರೊಂದಿಗೆ ಪುತ್ರ ನಿಖಿಲ್‌ ಕುಮಾರಸ್ವಾಮಿ, ಸೊಸೆ ರೇವತಿ ಹಾಗೂ ಸಹೋದರಿಯರು ಸೇರಿದಂತೆ ಕುಟುಂಬದ ಹತ್ತು ಮಂದಿ ರೆಸಾರ್ಟ್‌ನಲ್ಲಿ ಉಳಿದಿದ್ದಾರೆ. ಇದು ಖಾಸಗಿ ಭೇಟಿ ಎಂದು ಮೂಲಗಳು ತಿಳಿಸಿವೆ.

ಕಳೆದ ವಾರ 2018ರ ನೆರೆ ಸಂತ್ರಸ್ತರಿಗೆ ಹಸ್ತಾಂತರ ಮಾಡಿರುವ ಮನೆಗಳನ್ನು ಭಾನುವಾರ ಮಧ್ಯಾಹ್ನ ಕುಮಾರಸ್ವಾಮಿ ಅವರು ವೀಕ್ಷಣೆ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.