ಗುರುವಾರ , ನವೆಂಬರ್ 21, 2019
20 °C

ಗುರುಮಿಠಕಲ್‌ಗೆ ಅನುದಾನ ಕಡಿತ: ಎಚ್‌ಡಿಕೆ ಆಕ್ಷೇಪ

Published:
Updated:

ಬೆಂಗಳೂರು: ಹೈದರಾಬಾದ್‌ ಕರ್ನಾಟಕವನ್ನು ಕಲ್ಯಾಣ ಕರ್ನಾಟಕವೆಂದು ನಾಮಕರಣ ಮಾಡಿದ ಸಂದರ್ಭದಲ್ಲೇ ಗುರುಮಿಠಕಲ್‌ ಕ್ಷೇತ್ರಕ್ಕೆ ನೀಡಲಾಗಿದ್ದ ₹ 4.5 ಕೋಟಿ ಅನುದಾನವನ್ನು ಕಡಿತಗೊಳಿಸಿದ ಸರ್ಕಾರದ ಕ್ರಮಕ್ಕೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ‘ಅನುದಾನವನ್ನು ಕಡಿತಗೊಳಿಸಿದ ಮುಖ್ಯಮಂತ್ರಿ ಅವರಿಗೆ ಸಮಸ್ತ ಗುರುಮಿಠಕಲ್‌ ಕ್ಷೇತ್ರದ ಜನರ ಪರವಾಗಿ ತುಂಬು ಹೃದಯದ ಅಭಿನಂದನೆಗಳು’ ಎಂದು ಟಾಂಗ್‌ ನೀಡಿದ್ದಾರೆ.

ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದಾಗ ಅಂದರೆ ಕಳೆದ ಜುಲೈ 18ರಂದು ಹೈದರಾಬಾದ್‌ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ 2019–20ನೇ ಸಾಲಿನ ಕ್ರಿಯಾ ಯೋಜನೆಯಡಿಯಲ್ಲಿ ₹ 75 ಕೋಟಿಯನ್ನು ವಿವಿಧ ಕ್ಷೇತ್ರಗಳಿಗೆ ಹಂಚಲಾಗಿತ್ತು. ಆದರೆ ಈ ಅನುದಾನ ಬಳಕೆಯಾಗಿಲ್ಲ ಎಂಬ ಕಾರಣ ನೀಡಿ ಈ ಆದೇಶವನ್ನು ರದ್ದುಪಡಿಸಿ, ಮರು ಆದೇಶ ಹೊರಡಿಸುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸೂಚನೆ ನೀಡಿದ್ದಾರೆ. ಇದರಿಂದಾಗಿ ಕುಮಾರಸ್ವಾಮಿ ಅವರ ಟ್ವೀಟ್‌ಗೆ ಮಹತ್ವ ದೊರೆತಿದೆ.

ಪ್ರತಿಕ್ರಿಯಿಸಿ (+)