ನಿಖಿಲ್ ವಿವಾಹದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡರೂ, ನಿಯಮ ಪಾಲಿಸಿದರೂ ಇದ್ಯಾವುದೂ ಪಾಲನೆ ಆಗಿಲ್ಲ ಎಂಬ ಚರ್ಚೆಗಳು ನಡೆದವು. ರಾಜಕೀಯ ದ್ವೇಷಕ್ಕಾಗಿ ಶುಭ ಸಮಾರಂಭದ ವಿಷಯದಲ್ಲೂ ವಿಷ ಕಾರುವ ಮನಸ್ಥಿತಿಗಳು ರಾರಾಜಿಸಿದವು. ಆದರೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇವೆಲ್ಲವನ್ನೂ ನಿರಾಕರಿಸುವ ಮೂಲಕ ಸತ್ಯದ ಪರ ನಿಂತಿದ್ದಾರೆ. 1/4
ನಿಖಿಲ್ ವಿವಾಹದಲ್ಲೂ ರಾಜಕೀಯ ಹುಡುಕಿದ ‘ಸಾಮಾಜಿಕ ಮಾಧ್ಯಮ’ದ ಕೆಲವು ಹುಳುಕು ಮನಸ್ಸಿನ ಮಂದಿ ತಮ್ಮ ಮನದಲ್ಲಿರುವ ವಿಷ ಕಾರಿಕೊಂಡಿದ್ದಾರೆ. ಅವರೆಲ್ಲರೂ ಶರಣರ ಈ ಮಾತನ್ನು ನೆನಪಲ್ಲಿಟ್ಟುಕೊಳ್ಳಬೇಕು.
"ಮನದ ಕೋಪ ತನ್ನ ಅರಿವಿನ ಕೇಡು ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ ನೆರೆಮನೆಯ ಸುಡದು ಕೂಡಲಸಂಗಮದೇವಾ" 4/4