ಶನಿವಾರ, ಡಿಸೆಂಬರ್ 7, 2019
24 °C
ಪ್ರತ್ಯೇಕ ಇಲಾಖೆಗೆ ಬೇಸರ

ಆರೋಗ್ಯ– ವೈದ್ಯಕೀಯ ಶಿಕ್ಷಣ ಒಂದುಗೂಡಲಿ: ಬಿ.ಶ್ರೀರಾಮುಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ‘ರಾಜ್ಯದ ಜನರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ದೊರೆಯಬೇಕಾದರೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳನ್ನು ಒಂದುಗೂಡಿಸಿ ಒಂದೇ ಇಲಾಖೆಯಡಿ ತರುವುದು ಅಗತ್ಯವಿದೆ’ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಪ್ರತಿಪಾದಿಸಿದರು.

ಇಲ್ಲಿನ ಎಸ್‌.ನಿಜಲಿಂಗಪ್ಪ ವೈದ್ಯಕೀಯ ಕಾಲೇಜಿನಲ್ಲಿ ಶುಕ್ರವಾರ ಆರಂಭವಾದ ರಾಜ್ಯಮಟ್ಟದ ಪೆಥಾಲಜಿ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ‘ಆರೋಗ್ಯ ಇಲಾಖೆಯ ಬಳಿ ಆಸ್ಪತ್ರೆಗಳಿವೆ. ಆದರೆ ಅಲ್ಲಿ ಗುಣಮಟ್ಟದ ಚಿಕಿತ್ಸೆ ಕೊಡಬೇಕಾದರೆ, ವೈದ್ಯಕೀಯ ಕಾಲೇಜುಗಳ ನೆರವು ಬೇಕಿದೆ. ಈಗ ಅದು ಸಾಧ್ಯವಾಗುತ್ತಿಲ್ಲ. ಎರಡೂ ಇಲಾಖೆಗಳನ್ನು ಜೋಡಣೆ ಮಾಡಿದರೆ ಏನಾದರೂ ಸಾಧನೆ ಸಾಧ್ಯ. ಮುಂದಿನ ದಿನಗಳಲ್ಲಿ ಈ ಗೊಂದಲ ಯಾವ ರೀತಿ ಸರಿಪಡಿಸಬೇಕು ಎಂಬುದರ ಬಗ್ಗೆ ಸಮಾಲೋಚನೆ ಅಗತ್ಯವಿದೆ’ ಎಂದರು.

ಹಿಂದಿನ ತಪ್ಪು ಸರಿಯಾಗಲಿ:

ಸಚಿವರ ಮಾತಿಗೆ ಬೆಂಬಲ ವ್ಯಕ್ತಪಡಿಸಿದ ಶಾಸಕ ವೀರಣ್ಣ ಚರಂತಿಮಠ, ‘ಕೇಂದ್ರದಲ್ಲೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಒಂದೇ ಸಚಿವಾಲಯ ಹೊಂದಿವೆ. ಹಿಂದೆಯೂ ರಾಜ್ಯದಲ್ಲಿ ಅದೇ ರೀತಿ ಇತ್ತು. ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿ ಆಗಿದ್ದಾಗ ಸಂಪುಟದಲ್ಲಿ ಹೆಚ್ಚಿನ ಜನರಿಗೆ ಅವಕಾಶ ಕಲ್ಪಿಸಲು ಇಲಾಖೆ ವಿಭಜಿಸಿದ್ದರು. ಹಿಂದೆ ಆಗಿರುವ ತಪ್ಪನ್ನು ಈಗ ಸರಿಪಡಿಸಬೇಕಿದೆ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಜೊತೆ ಚರ್ಚಿಸಲಾಗುವುದು’ ಎಂದು ಹೇಳಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು