ಗುರುವಾರ , ಜುಲೈ 7, 2022
23 °C
ಸಹಾಯವಾಣಿ: 08046848600/ 0806669200

ಆರೋಗ್ಯ ಕಾರ್ಡ್‌ ವಿತರಣೆ ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಮಾ.31ರವರೆಗೆ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಆರೋಗ್ಯ ಕಾರ್ಡ್‌ಗಳ ವಿತರಣೆಯನ್ನು ಸ್ಥಗಿತ ಮಾಡಲಾಗಿದೆ. 

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಂಕಜ್‌ಕುಮಾರ್ ಪಾಂಡೆ ಸುತ್ತೋಲೆ ಹೊರಡಿಸಿದ್ದು, ‘ಫಲಾನುಭವಿಗಳ ಕೈ ಬೆರಳು ಗುರುತನ್ನು ಬಯೋಮೆಟ್ರಿಕ್ ಯಂತ್ರಗಳ ಮೂಲಕ ಪಡೆದು ಕಾರ್ಡ್‌ ವಿತರಿಸಲಾಗುತ್ತಿದೆ’ ಎಂದಿದ್ದಾರೆ.

ಫಲಾನುಭವಿಗಳು ಯೋಜನೆಯಡಿ ಆಧಾರ್ ಕಾರ್ಡ್‌ ಹಾಗೂ ಪಡಿತರ ಚೀಟಿಯನ್ನು ಸಲ್ಲಿಸಿ, ವೈದ್ಯಕೀಯ ಸೇವೆಗಳನ್ನು ಪಡೆದುಕೊಳ್ಳಬಹುದು ಆರೋಗ್ಯ ಸಹಾಯವಾಣಿ ‘104’ರ ಜತೆಗೆ ನೂತನವಾಗಿ 080 46848600 ಮತ್ತು 080 6669200 ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು