ಬೆಂಗಳೂರು: ರಾಜ್ಯದ ಪ್ರತಿಯೊಬ್ಬ ವ್ಯಕ್ತಿಗೂ ಉತ್ತಮ ಗುಣಮಟ್ಟದ ಆರೋಗ್ಯವನ್ನು ನೀಡುವ ಉದ್ದೇಶದಿಂದ ಆರೋಗ್ಯ ಮಾಹಿತಿಯನ್ನು ಸಂಗ್ರಹಿಸುವ ‘ಹೆಲ್ತ್ ರಿಜಿಸ್ಟರ್’ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

‘ಇಂತಹದ್ದೊಂದು ವ್ಯವಸ್ಥೆ ದೇಶದಲ್ಲೇ ಪ್ರಥಮವಾಗಿದ್ದು, ವಿಶ್ವದ ಕೆಲವೇ ದೇಶಗಳು ಇಂತಹ ವ್ಯವಸ್ಥೆಯನ್ನು ಹೊಂದಿವೆ’ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಸಂಬಂಧ ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ 18 ಮಂದಿ ತಜ್ಞರ ಸಭೆಯನ್ನು ನಡೆಸಿದರು.

ಪೈಲಟ್ ಯೋಜನೆಯಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇದನ್ನು ಜಾರಿ ಮಾಡಲಾಗುವುದು. ಇದು ಯಶಸ್ವಿಯಾದರೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ 6 ಕೋಟಿ ಜನರ ಮಾಹಿತಿ ಸಂಗ್ರಹಿಸಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ಎಲ್ಲರಿಗೂ ಏಕರೂಪದ ಅತ್ಯುತ್ತಮ ಆರೋಗ್ಯ ಸೇವೆ ಮತ್ತು ಚಿಕಿತ್ಸೆ ಸಿಗಬೇಕು ಎಂಬುದು ಸರ್ಕಾರದ ಉದ್ದೇಶ. ಇದಕ್ಕಾಗಿ ಹೆಲ್ತ್ ರಿಜಿಸ್ಟರ್ ಸಿದ್ಧಪಡಿಸುವ ಬಗ್ಗೆ ಸಭೆಯಲ್ಲಿ ಸುದೀರ್ಘವಾದ ಚರ್ಚೆ ನಡೆಸಲಾಯಿತು.

ಸಾರ್ವಜನಿಕರಲ್ಲಿ ಯಾವ ಕಾಯಿಲೆಗಳಿವೆ, ಭವಿಷ್ಯದಲ್ಲಿ ಯಾವುದಾದರೂ ಕಾಯಿಲೆಗಳಿಗೆ ತುತ್ತಾಗುವ ಸಾಧ್ಯತೆ ಇದೆಯೇ, ಆಹಾರ ಅಭ್ಯಾಸ ಮುಂತಾದವುಗಳ ಮಾಹಿತಿ ಪಡೆಯಲಾಗುವುದು. ರೋಗ ಬರುವುದನ್ನು ತಡೆಯುವುದು ಹೇಗೆ, ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಕಾಲ ಕಾಲಕ್ಕೆ ಸಲಹೆ ನೀಡಲಾಗುವುದು ಎಂದರು.

ಇದಕ್ಕೆ ಆಶಾ ಕಾರ್ಯಕರ್ತೆಯರು, ವೈದ್ಯಕೀಯ ಸಿಬ್ಬಂದಿ, ವೈದ್ಯರ ಜತೆಗೆ ಖಾಸಗಿ ಆರೋಗ್ಯ ವಲಯದವರ ನೆರವು ಪಡೆಯಲಾಗುವುದು. ಮುಂದಿನ ಎರಡು– ಮೂರು ದಿನಗಳಲ್ಲಿ ಮಾಹಿತಿ ಸಂಗ್ರಹಿಸಲು ಪ್ರಶ್ನಾವಳಿ ರೂಪಿಸಲಾಗುವುದು ಎಂದು ಸುಧಾಕರ್ ಹೇಳಿದರು.

ಈಗಾಗಲೇ ಇಂಥ ಯೋಜನೆ ಜಾರಿಗೊಳಿಸಿರುವ ದೇಶಗಳಲ್ಲಿ ಅಳವಡಿಸಿಕೊಂಡಿರುವ ಪದ್ಧತಿ, ಯೋಜನೆ ಜಾರಿಗೆ ರಾಜ್ಯದಲ್ಲಿ ಎದುರಾಗುವ ಸವಾಲು, ಅಡ್ಡಿ- ಆತಂಕಗಳು, ಯೋಜನೆಯ ಸ್ವರೂಪ, ಮನೆ ಮನೆ ಸಮೀಕ್ಷೆಗೆ ಅಳವಡಿಸಿಕೊಳ್ಳಬೇಕಿರುವ ಅಂಶಗಳು, ಅಗತ್ಯವಿರುವ ಮಾನವ ಸಂಪನ್ಮೂಲ, ಆರೋಗ್ಯ ಇಲಾಖೆಯ ನಾನಾ ವಿಭಾಗಗಳು ಈಗಾಗಲೇ ಹೊಂದಿರುವ ಮಾಹಿತಿ, ಖಾಸಗಿ ವಲಯದ ನೆರವು ಪಡೆಯಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.