ಆರೋಗ್ಯ ಯೋಜನೆಗಳ ವಿಲೀನ: ಇಂದು ನಿರ್ಧಾರ

ಬೆಂಗಳೂರು: ಕೇಂದ್ರ ಸರ್ಕಾರದ ‘ಆಯುಷ್ಮಾನ್ ಭಾರತ ‘ ಹಾಗೂ ರಾಜ್ಯ ಸರ್ಕಾರದ ‘ಆರೋಗ್ಯ ಕರ್ನಾಟಕ’ ಯೋಜನೆಯನ್ನು ವಿಲೀನಗೊಳಿಸುವ ಬಗ್ಗೆ ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.
ಆರೋಗ್ಯ ಕರ್ನಾಟಕ ಯೋಜನೆ ಕುರಿತು ಮುಖ್ಯಮಂತ್ರಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
‘ಆಯುಷ್ಮಾನ್ ಭಾರತ ಯೋಜನೆಯಲ್ಲಿ ಹಲವು ಲೋಪದೋಷಗಳ ಬಗ್ಗೆ ರಾಜ್ಯ ಸರ್ಕಾರ ಕೋರಿದ ಮಾಹಿತಿಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಸರ್ಕಾರಿ ವೈದ್ಯಕೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ವೈದ್ಯಕೀಯ ಸಂಘಟನೆಗಳ ಮುಖ್ಯಸ್ಥರೊಂದಿಗೆ ಚರ್ಚಿಸಿ ಅಭಿಪ್ರಾಯ ಪಡೆಯಲಾಗಿದೆ’ ಎಂದರು.
‘ಆರೋಗ್ಯ ಯೋಜನೆಯ ಹಣವನ್ನು ಇತರ ಉದ್ದೇಶಗಳಿಗೆ ಬಳಸುವುದಿಲ್ಲ. ಅಂತಹ ನಿರ್ದೇಶನವನ್ನು ನಾನು ನೀಡಿಲ್ಲ’ ಎಂದ ಮುಖ್ಯಮಂತ್ರಿ, ‘ಆಯುಷ್ಮಾನ್ ಭಾರತ ಯೋಜನೆಗೆ ಕೇಂದ್ರ ಸರ್ಕಾರ ₹ 250 ಕೋಟಿ ನೀಡಲಿದೆ. ರಾಜ್ಯ ಸರ್ಕಾರ ₹ 800 ಕೋಟಿ ಭರಿಸಲಿದೆ. ಯೋಜನೆಗೆ ಹೆಸರು ಕೇಂದ್ರ ಸರ್ಕಾರದ್ದು, ಹೆಚ್ಚಿನ ಹಣ ನಮ್ಮದು. ಪ್ರಚಾರ ಪಡೆಯಲು ಕೆಲವು ಯೋಜನೆಗಳಿಗೆ ಆಕರ್ಷಕ ಹೆಸರನ್ನು ಇಡಲಾಗುತ್ತಿದೆ’ ಎಂದು ಕೇಂದ್ರ ಸರ್ಕಾರದ ನಡೆಗೆ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.