ಬೆಂಗಳೂರು: ರಾಜ್ಯದಲ್ಲಿ ಶನಿವಾರ ಒಂದೇ ದಿನ 1,839 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತ 42 ಮಂದಿ ಮೃತಪಟ್ಟಿದ್ದಾರೆ. ಈವರೆಗೆ ಒಂದೇ ದಿನ ಇಷ್ಟೊಂದು ಸೋಂಕಿನ ಪ್ರಕರಣ ಹಾಗೂ ಸಾವಿನ ಸಂಖ್ಯೆ ವರದಿಯಾಗಿರಲಿಲ್ಲ.

ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಿದ ಬೆನ್ನಲ್ಲಿಯೇ ಅಧಿಕ ಸಂಖ್ಯೆಯಲ್ಲಿ ಪ್ರಕರಣಗಳೂ ವರದಿಯಾಗುತ್ತಿವೆ. ಇದೇ ವೇಳೆ ಮೃತಪಡುತ್ತಿರುವವರ ಸಂಖ್ಯೆಯೂ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ 24, ಬೀದರ್‌ನಲ್ಲಿ 6, ದಕ್ಷಿಣ ಕನ್ನಡದಲ್ಲಿ 4, ಕಲಬುರ್ಗಿ, ಧಾರವಾಡದಲ್ಲಿ ತಲಾ 3 ಮಂದಿ ಹಾಗೂ ಹಾಸನ, ಬೆಂಗಳೂರು ಗ್ರಾಮಾಂತರದಲ್ಲಿ ತಲಾ ಒಬ್ಬರು ಸಾವಿಗೀಡಾ
ಗಿರುವುದು ಶನಿವಾರ ದೃಢಪಟ್ಟಿದೆ.

ಇದರಿಂದಾಗಿ ಕೋವಿಡ್‌ಗೆ ಮೃತಪಟ್ಟವರ ಸಂಖ್ಯೆ 335ಕ್ಕೆ ಏರಿಕೆಯಾಗಿದೆ.ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 21,549ಕ್ಕೆ ತಲುಪಿದ್ದು, ಸದ್ಯ 11,966 ರೋಗಿಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.ಬೆಂಗಳೂರಿನಲ್ಲಿ 195 ಸೇರಿದಂತೆ 439 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಹೀಗಾಗಿ ಗುಣಮುಖರಾದವರ ಸಂಖ್ಯೆ 9,244ಕ್ಕೆ ತಲುಪಿದೆ. ಸದ್ಯ 224 ರೋಗಿಗಳಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿ ಗರಿಷ್ಠ: ರಾಜ್ಯದ 27 ಜಿಲ್ಲೆಗಳಲ್ಲಿಹೊಸದಾಗಿ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರಿನಲ್ಲಿ ಒಂದೇ ದಿನ1,172 ಮಂದಿ ಕೊರೊನಾ ಸೋಂಕಿತರಾಗಿದ್ದಾರೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 7,250ಕ್ಕೆ ತಲುಪಿದೆ. ಪರಿಣಾಮ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಸಮಸ್ಯೆ ಇನ್ನಷ್ಟು ಬಿಗಡಾಯಿಸಿದೆ. ಹೀಗಾಗಿ ಕೋವಿಡ್–19 ಆಸ್ಪತ್ರೆಗಳಲ್ಲಿ ಸೋಂಕು ಲಕ್ಷಣಗಳು ಬಹಿರಂಗವಾಗಿ ಗೋಚರಿಸದ ರೋಗಿಗಳನ್ನು ಕೋವಿಡ್ ಆರೈಕೆ ಕೇಂದ್ರಗಳಿಗೆ ಸ್ಥಳಾಂತರ ಮಾಡುವಂತೆ ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಹತ್ತಿರದ ಆಸ್ಪತ್ರೆಗಳಲ್ಲಿ ಹಾಸಿಗೆಗಳು ಸಿಗದಿದ್ದಲ್ಲಿ ಸಹಾಯವಾಣಿ ಸಂಖ್ಯೆ 1912ಕ್ಕೆ ಕರೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

ನ್ನಡ ಭವನದಲ್ಲಿರುವ ಕರ್ನಾಟಕ ಜಾನಪದ ಅಕಾಡೆಮಿಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿ ಸೇರಿ ಐದು ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಹೀಗಾಗಿ ಜು.7ರವರೆಗೆ ಕನ್ನಡ ಭವನವನ್ನು ಸೀಲ್ ಡೌನ್ ಮಾಡಲಾಗಿದೆ. ಕೊರೊನಾ ಸೋಂಕಿತ ವ್ಯಕ್ತಿಯೊಬ್ಬ ಆಂಬುಲೆನ್ಸ್‌ಗಾಗಿ12 ಗಂಟೆಗಳು ಕಾದ ಘಟನೆ ಹಾವೇರಿಯ ಹಾನಗಲ್ ತಾಲ್ಲೂಕಿನಲ್ಲಿ ನಡೆದಿದೆ.

50 ವರ್ಷದ ಮಹಿಳೆಯೊಬ್ಬರು ಮೂರು ದಿನಗಳಿಂದ 12 ಆಸ್ಪತ್ರೆಗಳನ್ನು ಸುತ್ತಿ, ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೂರು ದಿನಗಳಿಂದ ಪ್ರಯತ್ನಿಸಿದರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ದೊರೆಯದೆ ವ್ಯಕ್ತಿಯೊ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.