ಶುಕ್ರವಾರ, ಆಗಸ್ಟ್ 14, 2020
27 °C

ಭಾರಿ ಮಳೆ ಸಾಧ್ಯತೆ: ಕೊಡಗು ಜಿಲ್ಲೆಯಲ್ಲಿ ‘ರೆಡ್‌ ಅಲರ್ಟ್‌’ ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೊಡಗು ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಗುರುವಾರವೂ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ‘ರೆಡ್‌ ಅಲರ್ಟ್‌’ ಘೋಷಿಸಲಾಗಿದೆ. ಗುಡ್ಡಗಾಡು ಪ್ರದೇಶದ ನಿವಾಸಿಗಳು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.

ಜಿಲ್ಲೆಯ‌ ನಾಪೋಕ್ಲು, ಭಾಗಮಂಡಲ, ತಲಕಾವೇರಿ ಹಾಗೂ ಮಡಿಕೇರಿಯಲ್ಲಿ ಬುಧವಾರ ಬಿಡುವು ಕೊಟ್ಟು ಉತ್ತಮ ಮಳೆ ಸುರಿದಿದೆ. ಹಾರಂಗಿ ಜಲಾಶಯದ ಒಳಹರಿವು ಮತ್ತಷ್ಟು ಏರಿಕೆಯಾಗಿದ್ದು ಜಲಾಶಯದ ಭರ್ತಿಗೆ 11 ಅಡಿಯಷ್ಟೇ ಬಾಕಿಯಿದೆ.  

ಗುಡ್ಡ ಕುಸಿದು ವಾಹನ ಸಂಚಾರ ಬಂದ್‌ ಆಗಿದ್ದ ಭಾಗಮಂಡಲ– ತಲಕಾವೇರಿ ರಸ್ತೆಯ ಚೇರಂಗಾಲದ ಬಳಿ ಮಣ್ಣು ತೆರವು ಕಾರ್ಯಾಚರಣೆ ಪೂರ್ಣಗೊಂಡಿದ್ದು ವಾಹನ ಸಂಚಾರ ಆರಂಭವಾಗಿದೆ. ಭಾಗಮಂಡಲದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದರೆ ಪರಿಸ್ಥಿತಿ ನಿಭಾಯಿಸಲು ಹೋಂ ಗಾರ್ಡ್ಸ್‌ ನಿಯೋಜಿಸಲಾಗಿದೆ. ಮೋಟಾರ್‌ ಬೋಟ್‌ಗಳನ್ನು ಸನ್ನದ್ಧವಾಗಿ ಇಡಲಾಗಿದೆ.

ಭಾಗಮಂಡಲಕ್ಕೆ ಬುಧವಾರ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕ್ಷಮ ಮಿಶ್ರಾ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು