ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿಯಲ್ಲಿ ಆಲಿಕಲ್ಲು ಮಳೆ

Last Updated 25 ಮಾರ್ಚ್ 2019, 13:59 IST
ಅಕ್ಷರ ಗಾತ್ರ

ಬೆಳಗಾವಿ: ನಗರ ಪ್ರದೇಶ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸೋಮವಾರ ಸಂಜೆ ಒಂದರಿಂದ ಒಂದೂವರೆ ಗಂಟೆಯವರೆಗೆ ಉತ್ತಮ ಮಳೆ ಸುರಿದಿದೆ. ಬೆಳಗಾವಿ, ಹಿರೇಬಾಗೇವಾಡಿ, ಎಂ.ಕೆ. ಹುಬ್ಬಳ್ಳಿ, ಖಾನಾಪುರ, ಅಥಣಿ, ನಿಪ್ಪಾಣಿ ಹಾಗೂ ಹುಕ್ಕೇರಿಯಲ್ಲಿ ಮಳೆಯಾಗಿದೆ.

ಬೆಳಗಾವಿಯಲ್ಲಿ ಆಲಿಕಲ್ಲು ಸಮೇತ ಮಳೆಯಾಯಿತು. ವಿದ್ಯುತ್‌ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿತ್ತು. ಹಿರೇಬಾಗೇವಾಡಿಯಲ್ಲಿ ಸುರಿದ ಅರ್ಧಗಂಟೆ ಮಳೆಗೆ ಬಸವನಗರದ ಪ್ರದೇಶದ ಸ್ವೀಟ್‌ಮಾರ್ಟ್‌ವೊಂದರ ಮೇಲ್ಛಾವಣೆ ಹಾರಿಹೋಗಿದೆ. ಸುತ್ತಮುತ್ತಲಿನ ಹೊಲಗಳಲ್ಲಿದ್ದ ಶೆಡ್‌ಗಳ ಶೀಟ್‌ಗಳು ಹಾರಿಬಿದ್ದಿವೆ. ಹುಕ್ಕೇರಿಯಲ್ಲಿ ಗುಡುಗು, ಸಿಡಿಲು ಸಮೇತ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT