ಗುರುವಾರ , ನವೆಂಬರ್ 14, 2019
19 °C
ಸ್ಥಳದಲ್ಲೇ ಬೀಡು ಬಿಟ್ಟು ರಕ್ಷಣಾ ಕಾರ್ಯಚರಣೆ ಉಸ್ತುವಾರಿ ವಹಿಸಿಕೊಂಡ ತಹಸೀಲ್ದಾರ್‌

ಧಾರವಾಡದಲ್ಲಿ ಭಾರಿ ಮಳೆ: ನಡುಗಡ್ಡೆಯಲ್ಲಿ ಸಿಲುಕಿದ 9 ಕಾರ್ಮಿಕರು

Published:
Updated:

ಧಾರವಾಡ: ಭಾನುವಾರ ರಾತ್ರಿ ಹುಬ್ಬಳ್ಳಿ–ಧಾರವಾಡದಲ್ಲಿ  ಕುಂಭದ್ರೋಣ ಮಳೆ ಸುರಿದಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಹಾಗೂ ಶಿಶುವಿನಹಳ್ಳಿ ನಡುವಿನ ಸೇತುವೆ ಕಾಮಗಾರಿಯ ಕೆಲಸ ನಿರ್ವಹಿಸುತ್ತಿದ್ದ 9 ಜನ ಕಾರ್ಮಿಕರು ಹಳ್ಳದ ಮಧ್ಯ ಸಿಲುಕಿದ್ದು, ಅವರ ರಕ್ಷಣೆಗಾಗಿ ಕಾರ್ಯಚರಣೆ ಆರಂಭವಾಗಿದೆ. 

ನಡುಗಡ್ಡೆಯಲ್ಲಿ ಸಿಲುಕಿರುವ 9 ಮಂದಿಯೂ ಸೇತುವೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದರು. ಅವರು ತಂಗಿದ್ದ ಶೆಡ್‌ಗಳ ಸುತ್ತಲೂ ಮಳೆಯಿಂದಾಗಿ ಭಾರಿ ಪ್ರಮಾಣದಲ್ಲಿ ನೀರು ಆವೃತವಾಗಿದೆ. ಸದ್ಯ ಅವರ ರಕ್ಷಣಾ ಕಾರ್ಯಚರಣೆ ಆರಂಭವಾಗಿದೆ. 

ಹುಬ್ಬಳ್ಳಿ ಗ್ರಾಮೀಣ ತಹಶಿಲ್ದಾರರ ಪ್ರಕಾಶ್ ನಾಸಿ ಸ್ಥಳದಲ್ಲೇ ಇದ್ದು, ರಕ್ಷಣಾ ಕಾರ್ಯದ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.  

ಜಲಾವೃತ ಪ್ರದೇಶಗಳಿಗೆ ಸಚಿವ ಶೆಟ್ಟರ್‌ ಭೇಟಿ 

ಮಳೆಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಶಾಸಕ ಅಮೃತ ದೇಸಾಯಿ, ಜಿಲ್ಲಾಧಿಕಾರಿ ದೀಪಾ ಚೋಳನ್‌ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ಮಳೆಹಾನಿ ಮತ್ತು ಮುಂಚಿತವಾಗಿ ಕೈಗೊಂಡ ಮುಂಜಾಗ್ರತಾ ಕ್ರಮಗಳು, ಪರಿಹಾರ ವಿತರಣೆ ಕುರಿತು ಮಾಹಿತಿ ನೀಡಿದರು.

ಪ್ರತಿಕ್ರಿಯಿಸಿ (+)