ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಹಲವೆಡೆ ಉತ್ತಮ ಮಳೆ, ಕೊಡಗಿನಲ್ಲಿ ಗುಡುಗು ಸಹಿತ ಮಳೆ

Last Updated 8 ಏಪ್ರಿಲ್ 2020, 19:49 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬುಧವಾರ ಮಳೆಯಾಗಿದೆ. ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಸುರಿದು ವಾತಾವಣಕ್ಕೆ ತಂಪೆರೆದರೆ, ಇನ್ನೂ ಕೆಲವೆಡೆ ಗುಡುಗು ಸಹಿತ ಸುರಿದಿದೆ.

ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗಿದೆ. ನಾಪೋಕ್ಲು ಹೋಬಳಿ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ಮಧ್ಯಾಹ್ನ ಆರಂಭವಾದ ಮಳೆ, ಅರ್ಧ ಗಂಟೆ ಆರ್ಭಟಿಸಿತು. ಬೇತು, ಬಲಮುರಿ, ಕೈಕಾಡು ಭಾಗಗಳಲ್ಲೂ ರಭಸದ ಮಳೆಯಾಗಿದೆ.

ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಹಾಗೂ ಪಿರಿಯಾಪಟ್ಟಣದ ಸುತ್ತಮುತ್ತ ಬಿರುಸಿನ ಮಳೆಯಾಗಿದೆ.

ಚಿತ್ರದುರ್ಗ ಜಿಲ್ಲೆಯ ಕೆಲವೆಡೆ ಬುಧವಾರ ಉತ್ತಮ ಮಳೆಯಾಯಿತು. ಹೊಸದುರ್ಗ ಪಟ್ಟಣ ಸೇರಿ ತಾಲ್ಲೂಕಿನ ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆ ಸುರಿಯಿತು.ಅರ್ಧ ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆ ಸುರಿಯಿತು. ಬಿರುಗಾಳಿಗೆ ಕೆಲವೆಡೆ ತೆಂಗು, ಅಡಿಕೆ ತೋಟಗಳಿಗೆ ಹಾನಿಯಾಗಿದೆ. ಚಳ್ಳಕೆರೆ ತಾಲ್ಲೂಕಿನಲ್ಲಿ ಆಲಿಕಲ್ಲು ಮಳೆಯಾಗಿದೆ.

ಚಿಕ್ಕಮಗಳೂರು: ಕಾಫಿನಾಡಿನ ವಿವಿಧೆಡೆ ಉತ್ತಮ ಮಳೆಯಾಗಿದೆ. ಇಳೆಗೆ ತಂಪೆರೆದಿದೆ. ಕಡೂರು, ಚಿಕ್ಕಮಗಳೂರು, ಮೂಡಿಗೆರೆ, ಕೊಟ್ಟಿಗೆಹಾರ, ಕಳಸ ಭಾಗದಲ್ಲಿ ಮಳೆಯಾಗಿದೆ. ಸಿಡಿಲು, ಮಿಂಚು, ಗಾಳಿ ಆರ್ಭಟವೂ ಇತ್ತು. ಪೂರ್ವ ಮುಂಗಾರು ಮಳೆ ಬೆಳೆಗಾರರಲ್ಲಿ ಹರ್ಷ ಮೂಡಿಸಿದೆ.ಶಿವಮೊಗ್ಗ, ಭದ್ರಾವತಿ ಸುತ್ತಮುತ್ತ ಸಹ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT