ಬುಧವಾರ, ಜೂಲೈ 8, 2020
25 °C

ಬೆಂಗಳೂರಿನಲ್ಲಿ ಧಾರಾಕಾರ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜಧಾನಿ ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಶುಕ್ರವಾರ ಬೆಳಿಗ್ಗೆಯಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತು.

ಸಂಜೆ 5 ಗಂಟೆ ಸುಮಾರಿಗೆ ಮಳೆ ಆರಂಭವಾಗಿದ್ದು, ಹಲವೆಡೆ ಆರ್ಭಟಿಸಿ ಸುರಿಯುತ್ತಿದೆ.

ರಾಜಾಜಿನಗರ, ವಿಜಯನಗರ, ಮಹಾಲಕ್ಷ್ಮಿ ಲೇಔಟ್, ಬಸವೇಶ್ವರ ನಗರ ಸೇರಿದಂತೆ ಹಲವೆಡೆ ಮಳೆ ಆಗುತ್ತಿದೆ. ಸಿಡಿಲು ಹಾಗೂ ಗುಡುಗಿನ ಆರ್ಭಟವೂ ಜೋರಾಗಿದೆ. ಗುರುವಾರ ಸಂಜೆಯೂ ಅಲ್ಲಲ್ಲಿ ತುಂತುರು ಮಳೆ ಆಗಿತ್ತು. ಇಂದು ಶುಕ್ರವಾರ ಮಳೆ ಹೆಚ್ಚಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು