ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

11ರಿಂದ ಕರಾವಳಿಯಲ್ಲಿ ಭಾರಿ ಮಳೆ: ‘ಆರೆಂಜ್ ಅಲರ್ಟ್‌’ ಘೋಷಣೆ

Last Updated 8 ಜೂನ್ 2020, 21:12 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇದೇ 11 ಮತ್ತು 12ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್‌’ ಘೋಷಿಸಿದೆ.

11ರಿಂದ ದಕ್ಷಿಣ ಒಳನಾಡಿನಲ್ಲಿ ಹಾಗೂ 12ರಿಂದ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ಹಾಗೂ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಸೋಮವಾರ 5 ಸೆಂ.ಮೀ ಮಳೆಯಾಗಿದೆ. ಗೋಕರ್ಣ, ಭಾಗಮಂಡಲ 4, ಕಾರವಾರ 3, ಮೂಡುಬಿದಿರೆ, ಹೊಸನಗರ, ದೇವನಹಳ್ಳಿ 2, ಕನಕಪುರ, ರಾಮನಗರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ರಾಯಚೂರಿನಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT