ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿನಿಂದ ಭಾರಿ ಮಳೆ ಸಾಧ್ಯತೆ

Last Updated 27 ಮೇ 2020, 20:12 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇದೇ 28ರಿಂದ ಜೂನ್ 1ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಭಾಗದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದ್ದು, ಮೇ 28ರಿಂದ ಜೂ.1ರವರೆಗೆ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ. ಮೇ 31ರಿಂದ ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲೂ ಧಾರಾಕಾರ ಮಳೆಯಾಗಲಿದೆ.

ಹಾಸನ ಜಿಲ್ಲೆಯ ನುಗ್ಗೇಹಳ್ಳಿಯಲ್ಲಿ ಬುಧವಾರ 4 ಸೆಂ.ಮೀ.ಮಳೆಯಾಗಿದೆ. ಮಾಲೂರು, ಹೊಸಕೋಟೆ, ಬೆಂಗಳೂರು 3, ಕೆ.ಆರ್.ಪೇಟೆ, ಬೆಳ್ಳೂರು 2, ಕೋಲಾರ, ಚಾಮರಾಜನಗರ, ಮದ್ದೂರು, ಪಿರಿಯಾಪಟ್ಟಣ, ಬಂಗಾರಪೇಟೆ, ಚಿತ್ರದುರ್ಗ, ದೊಡ್ಡಬಳ್ಳಾಪುರ, ಕೊಳ್ಳೇಗಾಲದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಕಲಬುರ್ಗಿಯಲ್ಲಿ 44 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಹಾಗೂ ಮಡಿಕೇರಿಯಲ್ಲಿ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ಮಸ್ಕಿ ಜಲಾಶಯಕ್ಕೆ 6 ಅಡಿ ನೀರು

ರಾಯಚೂರುಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆ ಸುರಿದಿದೆ. ಮಸ್ಕಿ ತಾಲ್ಲೂಕಿನ ಮಾರಲದಿನ್ನಿ ಬಳಿ ನಿರ್ಮಿಸಿರುವ ಮಸ್ಕಿ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಉತ್ತಮ ಮಳೆ ಸುರಿದ ಪರಿಣಾಮ, ಜಲಾಶಯಕ್ಕೆ ಬುಧವಾರ ಒಂದೇ ದಿನ 6 ಅಡಿ ನೀರು ಹರಿದು ಬಂದಿದೆ.

ಮಸ್ಕಿ ವ್ಯಾಪ್ತಿಯ 7,500 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಜಲಾಶಯ ಸಂಪೂರ್ಣ ಖಾಲಿಯಾಗಿತ್ತು. 29 ಅಡಿ ಎತ್ತರದವರೆಗೆ ನೀರು ಸಂಗ್ರಹವಾಗುವ ಸಾಮರ್ಥ್ಯದ ಜಲಾಶಯ ಇದಾಗಿದೆ ಎಂದು ಯೋಜನೆಯ ಪ್ರಭಾರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ದಾವುದ್ ತಿಳಿಸಿದ್ದಾರೆ.

ದೇವಸೂಗೂರು ಹೋಬಳಿ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಬಿರುಗಾಳಿ ಸಹಿತ ಸುರಿದ ಮಳೆಗೆ 50 ಮನೆಗಳ ಟಿನ್‌ಶೀಟ್‌‌ ಹಾರಿ ಹೋಗಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಅರಸಿಗೇರಾ ಗ್ರಾಮದಲ್ಲಿ ಸಿಡಿಲಿಗೆ ಶೇಖರಪ್ಪ ಅವರಿಗೆ ಸೇರಿದ ನಾಲ್ಕು ಹಸುಗಳು ಸಾವನ್ನಪ್ಪಿವೆ.

ಧಾರಾಕಾರ ಮಳೆ

ಮೈಸೂರು ನಗರ ಸೇರಿದಂತೆ ತಾಲ್ಲೂಕಿನಲ್ಲಿ ಬುಧವಾರ ಧಾರಾಕಾರ ಮಳೆಯಾಗಿದೆ. ಕೆ.ಆರ್.ನಗರದ ಬೀಚನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಮಂಗಳವಾರ ಸುರಿದ ಮಳೆಗೆ ಬಾಳೆತೋಟ ಹಾನಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT