ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡು ದಿನ ಭಾರಿ ಮಳೆ ಸಾಧ್ಯತೆ

Last Updated 18 ಮೇ 2020, 22:40 IST
ಅಕ್ಷರ ಗಾತ್ರ

ಬೆಂಗಳೂರು/ಉಡುಪಿ:ಅಂಫನ್‌ ಚಂಡಮಾರುತ ಪ್ರಭಾವದಿಂದ ಮಂಗಳವಾರ ಮತ್ತು ಬುಧವಾರ (19 ಹಾಗೂ 20) ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಭಾಗದಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆ ಸುರಿಯಲಿದ್ದು, ಸಾರ್ವಜನಿಕರು ಎಚ್ಚರವಾಗಿರಬೇಕು ಎಂದು ಸೂಚನೆ ನೀಡಲಾಗಿದೆ.

‘64ಮಿ.ಮೀ.ನಿಂದ 115 ಮಿ.ಮೀ.ನಷ್ಟು ಮಳೆ ಸುರಿಯಬಹುದು. ಅರಬ್ಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತ ಹಾಗೂ ಪೂರ್ವ ಕರಾವಳಿಯಲ್ಲಿ ತಲೆದೋರಿರುವ ಚಂಡಮಾರುತಗಳಿಂದಾಗಿ ಈ ಬೆಳವಣಿಗೆ ಉಂಟಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT