ಕೊಡಗು: ಮುಂದುವರಿದ ಮಳೆ, ಇಂದು-ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

7

ಕೊಡಗು: ಮುಂದುವರಿದ ಮಳೆ, ಇಂದು-ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Published:
Updated:

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಶುಕ್ರವಾರ ಮಳೆ ರಭಸವಾಗಿ ಸುರಿಯುತ್ತಿದೆ. ನಾಪೋಕ್ಲು, ಅಯ್ಯಂಗೇರಿ, ಭಾಗಮಂಡಲ, ಚೆಟ್ಟಿಮಾನಿ ವ್ಯಾಪ್ತಿಯ ಗ್ರಾಮಗಳಲ್ಲಿ ಭಾರಿ ಮಳೆ ಆಗುತ್ತಿದೆ.

ಗುರುವಾರ ಸ್ವಲ್ಪ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಚುರುಕಾಗಿದ್ದು ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ.

ಇಂದು, ನಾಳೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. 

ಚಿಕ್ಕಮಗಳೂರು: ಜಿಲ್ಲೆಯ ಕಳಸ ಭಾಗದ ಚನ್ನಹಡ್ಲು ಬಳಿ ಗುಡ್ಡ ಕುಸಿದು ಮಣ್ಣು ರಸ್ತೆಗೆ ಬಿದ್ದಿದೆ. ಚನ್ನಹಡ್ಲು ಗ್ರಾಮದ ಸಂಪರ್ಕ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆಯಾಗಿದ್ದು, ತೆರವು ಕಾರ್ಯಾಚರಣೆ ಮುಂದುವರಿದಿದೆ. 

ಬರಹ ಇಷ್ಟವಾಯಿತೆ?

 • 5

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !