ಕೊಡಗು: ಮತ್ತೆ ಮತ್ತೆ ಮಳೆ, ಹೆಚ್ಚುತ್ತಿದೆ ಆತಂಕ

7

ಕೊಡಗು: ಮತ್ತೆ ಮತ್ತೆ ಮಳೆ, ಹೆಚ್ಚುತ್ತಿದೆ ಆತಂಕ

Published:
Updated:

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಹಾಮಳೆಗೆ ಈಗಾಗಲೇ ಸಾಕಷ್ಟು ನಷ್ಟ ಉಂಟಾಗಿದ್ದು, ಮತ್ತೆ ಮತ್ತೆ ಮಳೆ ಬೀಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಹಾವೇರಿ ಭಾಗದಲ್ಲಿ ಸಿಲುಕಿಕೊಂಡಿದ್ದ 30 ಮಂದಿಯನ್ನು ರಕ್ಷಣಾ ಸಿಬ್ಬಂದಿ ಸುರಕ್ಷಿತ ಸ್ಥಳಕ್ಕೆ ಕರೆ ತಂದಿದ್ದಾರೆ.

ರಕ್ಷಣಾ ಕಾರ್ಯ ಚುರುಕಾಗಿದ್ದು ಯೋಧರು, ಅಗ್ನಿಶಾಮಕ ದಳದ ಸಿಬ್ಬಂದಿ, ಎನ್‌ಡಿಆರ್‌ಎಫ್‌ ಸಿಬ್ಬಂದಿ ಬೆಟ್ಟಗಳನ್ನು ಸುತ್ತಾಡಿ ಸಂಕಷ್ಟಕ್ಕೆ ಸಿಲುಕಿದವರನ್ನು ತಾತ್ಕಾಲಿಕ ಪರಿಹಾರ ಕೇಂದ್ರಕ್ಕೆ ಕರೆ ತರುತ್ತಿದ್ದಾರೆ. ಆದರೆ, ಕುಟುಂಬಸ್ಥರ ಮಾಹಿತಿ ಪಡೆದು ಹುಡುಕಾಟ ನಡೆಸಿದರೂ ಕೆಲವರ ಸುಳಿವು ಸಿಗುತ್ತಿಲ್ಲ. ಇದರಿಂದ ತಾತ್ಕಾಲಿಕ ಪರಿಹಾರ ಕೇಂದ್ರದಲ್ಲಿ ತಂಗಿರುವವರಲ್ಲಿ ಆತಂಕ ಹೆಚ್ಚಿಸಿದೆ.

ಬರಹ ಇಷ್ಟವಾಯಿತೆ?

 • 3

  Happy
 • 3

  Amused
 • 2

  Sad
 • 0

  Frustrated
 • 1

  Angry

Comments:

0 comments

Write the first review for this !