ಸೋಮವಾರ, ಆಗಸ್ಟ್ 26, 2019
28 °C

ಚಿಕ್ಕಮಗಳೂರು, ಕೊಡಗು ಸೇರಿ ಹಲವು ಜಿಲ್ಲೆಗಳ ಶಾಲಾ–ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Published:
Updated:

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ, ಮೂಡಿಗೆರೆ, ಕೊಪ್ಪ, ಎನ್.ಆರ್.ಪುರ ತಾಲ್ಲೂಕುಗಳ ಶಾಲಾ– ಕಾಲೇಜುಗಳಿಗೆ ನಾಳೆ (ಶನಿವಾರ) ರಜೆ ಘೋಷಿಸಲಾಗಿದೆ.

ಉಡುಪಿ: ಜಿಲ್ಲೆಯಲ್ಲಿ ತೀವ್ರ ಮಳೆ ಸುರಿಯುವ ಮುನ್ಸೂಚನೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಆ.10ರಂದು ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

10ರಂದು ಜಿಲ್ಲೆಯಲ್ಲಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಜಾರಿಯಲ್ಲಿರುತ್ತದೆ ಎಂದು ಡಿಸಿ ತಿಳಿಸಿದ್ದಾರೆ.

ಕೊಡಗು: ಜಿಲ್ಲೆಯಲ್ಲಿ ಭಾಗಮಂಡಲ ಸೇರಿದಂತೆ ಹಲವು ಭಾಗಗಳಲ್ಲಿ ಧಾರಕಾರ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ಶಾಲಾ –ಕಾಲೇಜುಗಳಿಗೆ ರಜೆ ನೀಡಲಾಗಿದೆ. 

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಶನಿವಾರವೂ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಉತ್ತರ ಕನ್ನಡ: ಜಿಲ್ಲೆಯಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಶನಿವಾರ ಕೂಡ ಜಿಲ್ಲೆಯ ಎಲ್ಲ ಶಾಲೆ– ಕಾಲೇಜುಗಳು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಕೆ. ಆದೇಶಿಸಿದ್ದಾರೆ.

Post Comments (+)