ಕರಾವಳಿ, ಮಲೆನಾಡಿನಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ

7
ಕೊಡಗಿಗೆ 5 ಜಿಲ್ಲೆಗಳ ಅಧಿಕಾರಿಗಳ ತಂಡ

ಕರಾವಳಿ, ಮಲೆನಾಡಿನಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ

Published:
Updated:

ಬೆಂಗಳೂರು: ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮುಂದಿನ ಐದು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲೂ ಭಾರಿ ಮಳೆ ಮುಂದುವರಿಯುವ ಸೂಚನೆಯನ್ನು ಶುಕ್ರವಾರ ನೀಡಿದೆ.

ಆ.18 ರಂದು ಮಲೆನಾಡಿನ ಜಿಲ್ಲೆಗಳು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆಗಳಲ್ಲಿ ಭಾರಿ ಮಳೆ ಆಗಲಿದೆ. ಅರಬೀ ಸಮುದ್ರದಲ್ಲಿ ಪ್ರತಿಕೂಲ ಪರಿಸ್ಥಿತಿ ಇರಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ ಎಂದೂ ಹೇಳಿದೆ.

ಆ.19 ರಂದು ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಭಾರಿ ಮಳೆ ಆಗಲಿದೆ. ಆ.20 ಮತ್ತು 21 ರಂದು ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆಯಾಗಲಿದೆ. 

ಅಧಿಕಾರಿಗಳ ತಂಡ ರವಾನೆ: ಕೊಡಗು ಜಿಲ್ಲೆಯು ಅತಿವೃಷ್ಠಿಗೆ ಒಳಗಾಗಿರುವುದರಿಂದ ತುರ್ತು ಕಾರ್ಯಕ್ಕೆ ನೆರವಾಗಲು ಮೈಸೂರು, ಮಂಡ್ಯ, ರಾಮನಗರ, ದಾವಣಗೆರೆ ಮತ್ತು ಬೆಂಗಳೂರು ನಗರ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಅಧಿಕಾರಿ ಮತ್ತು ನೌಕರರನ್ನು ಒಳಗೊಂಡ ತಲಾ ಒಂದೊಂದು ತಂಡ ಕಳುಹಿಸಿಕೊಡುವಂತೆ ಎಂದು ಕಂದಾಯ ಇಲಾಖೆ ಆದೇಶಿಸಿದೆ.

 

 

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !