ಭಾನುವಾರ, ಸೆಪ್ಟೆಂಬರ್ 15, 2019
30 °C

ಕರಾವಳಿ, ದಕ್ಷಿಣದ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Published:
Updated:

ಬೆಂಗಳೂರು: ಕರಾವಳಿ ಕರ್ನಾಟಕದಲ್ಲಿ ಮತ್ತು ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. 

ಕರಾವಳಿ ಕರ್ನಾಟಕದಲ್ಲಿ ಇಂದು(ಶನಿವಾರ) ಭಾರೀ ಮಳೆಯಾಗಲಿದ್ದು,  ದಕ್ಷಿಣ ಕರ್ನಾಟಕದ ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಮಂಡ್ಯ ಮತ್ತು ಕೋಲಾರ ಜಿಲ್ಲೆಗಳಲ್ಲಿ 24 ಗಂಟೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಈ ಕುರಿತು ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್‌ಐ ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಇಲ್ಲೇಖಿಸಿ ವರದಿ ಮಾಡಿದೆ. 

ಕರಾವಳಿ ಮತ್ತು ಉತ್ತರ ಕರ್ನಾಟಕದ ಬಹುತೇಕ ಭಾಗದಲ್ಲಿ ಈ ವರೆಗೆ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ. ಆದರೆ, ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆ ಕೊರೆತೆ ಎದುರಾಗಿದೆ. ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಮಳೆಗಾಲದಲ್ಲೇ ನೀರಿಗೆ ತತ್ವಾರ ಎದುರಾಗಿದೆ. 

ಇದನ್ನೂ ಓದಿ: ಕೈಕೊಟ್ಟ ಮುಂಗಾರು: ಬಿತ್ತನೆಗೆ ಹಿನ್ನಡೆ

Post Comments (+)