ಭಾನುವಾರ, ಆಗಸ್ಟ್ 18, 2019
25 °C

ಕರಾವಳಿ, ಮಲೆನಾಡಿನಲ್ಲಿ ಬಿರುಸಾದ ಮಳೆ: ರೈಲು ನಿಲ್ದಾಣಕ್ಕೆ ನುಗ್ಗಿದ ನೀರು

Published:
Updated:
Prajavani

ಮಂಗಳೂರು: ಜಿಲ್ಲೆಯಾದ್ಯಂತ ಬುಧವಾರ ರಾತ್ರಿಯಿಂದಲೇ ಉತ್ತಮ ಮಳೆಯಾಗುತ್ತಿದೆ. ಮಂಗಳೂರು ನಗರದಲ್ಲಿ ಗುರುವಾರ ಬೆಳಿಗ್ಗೆ ಸುರಿದ ಮಳೆಗೆ ಹಲವೆಡೆ ಕೃತಕ ನೆರೆ ಸೃಷ್ಟಿಯಾಗಿತ್ತು.

ಒಳಚರಂಡಿ ಕಾಮಗಾರಿ ನಡೆಯುತ್ತಿರುವ ಪರಿಣಾಮ ಮಂಗಳೂರು ಕೇಂದ್ರ ರೈಲು ನಿಲ್ದಾಣದೊಳಗೆ ಮಳೆ ನೀರು ನುಗ್ಗಿದೆ. ಟಿಕೆಟ್‌ ಕೌಂಟರ್, ಪ್ರವೇಶ ದ್ವಾರ, ಮುಂಭಾಗದ ರಸ್ತೆ, ಪಾರ್ಕಿಂಗ್‌ ಸ್ಥಳದಲ್ಲಿ ನೀರು ನಿಂತಿದ್ದು, ಹೊರಹಾಕಲು ಸಿಬ್ಬಂದಿ ಶ್ರಮಿಸಿದರು.

ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ಭಾಗದಲ್ಲಿ ಉತ್ತಮ ಮಳೆಯಾಗಿದ್ದು, ನೇತ್ರಾವತಿ, ಕುಮಾರಧಾರಾ, ಪಯಸ್ವಿನಿ, ಪಲ್ಗುಣಿ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.

ಸಾಧಾರಣ ಮಳೆ: ಚಿಕ್ಕಮಗಳೂರು ನಗರದ ವಿವಿಧೆಡೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುರುವಾರ ಸಾಧಾರಣ ಮಳೆಯಾಯಿತು.

Post Comments (+)