ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಲಾನಯನ ಪ್ರದೇಶದಲ್ಲಿ ಮುಂದುವರಿದ ಮಳೆ: ತುಂಗಭದ್ರೆಗೆ ಒಂದೇ ದಿನ 3 ಅಡಿ ನೀರು

Last Updated 10 ಜುಲೈ 2020, 9:10 IST
ಅಕ್ಷರ ಗಾತ್ರ

ಹೊಸಪೇಟೆ: ಜಲಾನಯನ ಪ್ರದೇಶದಲ್ಲಿ ಸತತವಾಗಿ ಉತ್ತಮವಾಗಿ ಮಳೆಯಾಗುತ್ತಿರುವ ಕಾರಣ ಇಲ್ಲಿನ ತುಂಗಭದ್ರಾ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.

ಕಳೆದ 24 ಗಂಟೆಗಳಲ್ಲಿ ಅಣೆಕಟ್ಟೆಗೆ ಸುಮಾರು 3 ಅಡಿ ನೀರು ಹರಿದು ಬಂದಿದೆ. ಶುಕ್ರವಾರ 26,007 ಕ್ಯುಸೆಕ್‌ ಒಳಹರಿವು ದಾಖಲಾಗಿದೆ. ಗುರುವಾರ 16,211 ಕ್ಯುಸೆಕ್‌, ಬುಧವಾರ 7,321 ಕ್ಯುಸೆಕ್‌,, ಮಂಗಳವಾರ 2,532 ಕ್ಯುಸೆಕ್‌ ಒಳಹರಿವು ದಾಖಲಾಗಿತ್ತು. ಒಟ್ಟು 1,633 ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 1,596.18 ಅಡಿ ನೀರಿನ ಸಂಗ್ರಹವಿದೆ.

‘ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಶಿವಮೊಗ್ಗದ ತುಂಗಾ ಜಲಾಶಯದಿಂದಲೂ ನದಿಗೆ ನೀರು ಹರಿಸಲಾಗುತ್ತಿದೆ. ಇನ್ನೂ ಮೂರ್ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಒಳಹರಿವು ಮತ್ತಷ್ಟು ಹೆಚ್ಚಾಗಿ ಅಪಾರ ನೀರು ಜಲಾಶಯಕ್ಕೆ ಹರಿದು ಬರಲಿದೆ’ ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

ನಿಲ್ಲದ ಮಳೆ:ಹೊಸಪೇಟೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಗುರುವಾರ ತಡರಾತ್ರಿ ಉತ್ತಮ ಮಳೆಯಾಗಿತ್ತು. ಶುಕ್ರವಾರ ಬೆಳಗಿನ ಜಾವ ಕೂಡ ಕೆಲ ಸಮಯ ವರ್ಷಧಾರೆಯಾಗಿದೆ. ಬೆಳಿಗ್ಗೆಯಿಂದ ಕಾರ್ಮೋಡ ಕವಿದಿದ್ದು, ಬಿಟ್ಟು ಬಿಟ್ಟು ಮಳೆಯಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT