ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಮಳೆಗೆ ಸಂಚಾರ ಅಸ್ತವ್ಯಸ್ತ

Last Updated 27 ಸೆಪ್ಟೆಂಬರ್ 2019, 20:00 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯಲ್ಲಿ ನಾಲ್ಕನೇ ದಿನವೂ ಮಳೆ ಮುಂದುವರಿದಿದೆ. ರಾಯಚೂರು, ಮಾನ್ವಿ ಮತ್ತು ಸಿರವಾರ ತಾಲ್ಲೂಕುಗಳಲ್ಲಿ ಅತಿ ಹೆಚ್ಚು ಮಳೆ ಸುರಿದಿದ್ದು, ಗ್ರಾಮೀಣ ಭಾಗಗಳಲ್ಲಿ ಹಳ್ಳಗಳು ತುಂಬಿ ನೀರು ರಸ್ತೆ ಮೇಲೆ ಹರಿಯುತ್ತಿರುವುದರಿಂದ ಸಂಚಾರಕ್ಕೆ ತೊಂದರೆಯಾಗಿದೆ.

ಸಿರವಾರ ತಾಲ್ಲೂಕಿನ ಮರಕಂದಿನ್ನಿ–ಸುಂಕನೂರು ಸೇತುವೆ ಕೊಚ್ಚಿಹೋಗಿದ್ದು ಸಂಚಾರ ಸ್ಥಗಿತವಾಗಿದೆ. ಸಿಂಧನೂರಿನಲ್ಲಿ ಹಿರೇಹಳ್ಳ ತುಂಬಿ ಹರಿಯುತ್ತಿದೆ. ‘ಮಳೆ ಮುಂದುವರಿದರೆ ದೊಡ್ಡ ಪ್ರಮಾಣದಲ್ಲಿ ಬೆಳೆಹಾನಿ ಆಗಲಿದ್ದು, ಹಾನಿಯ ಮಾಹಿತಿ ಸಂಗ್ರಹಿಸುತ್ತಿದ್ದೇವೆ’ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಚೇತನಾ ಪಾಟೀಲ ತಿಳಿಸಿದರು.

ಅ.1ರವರೆಗೆ ರಾಜ್ಯದಲ್ಲಿ ಕಡಿಮೆ ಮಳೆ ಸಾಧ್ಯತೆ (ಬೆಂಗಳೂರು): ಸೆಪ್ಟೆಂಬರ್‌ 28ರಿಂದ ಅಕ್ಟೋಬರ್‌ 1ರವರೆಗೆರಾಜ್ಯಾದ್ಯಂತ ಮಳೆ ಪ್ರಮಾಣ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಕೋಲಾರ, ಮಂಡ್ಯ ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 28ರಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಗಂಟೆಗೆ 45ರಿಂದ 55 ಕಿ.ಮೀ.ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮುಂದಿನ 24 ಗಂಟೆಗಳವರೆಗೆ ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಸೂಚಿಸಿದೆ.

ಉಡುಪಿ ಜಿಲ್ಲೆಯ ಕೋಟದಲ್ಲಿ 6 ಸೆಂ.ಮೀ., ಹೊನ್ನಾವರ, ಕುಂದಾಪುರ 5, ಮಂಗಳೂರು, ಭಟ್ಕಳ 4, ಸಿದ್ದಾಪುರ, ಕಾರವಾರದಲ್ಲಿ ತಲಾ 3 ಸೆಂ.ಮೀ. ಮಳೆಯಾಗಿದೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT