ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್‌ ಕೊರತೆ– ಜನರಿಗೆ ಚಿಂತೆ ಬೇಡ: ಡಿಕೆಶಿ

Last Updated 6 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಜಲಾಶಯಗಳಲ್ಲಿ ನೀರಿನ ಕೊರತೆ ಇದೆ. ಕೇಂದ್ರದಿಂದ ರಾಜ್ಯಕ್ಕೆ ಹಂಚಿಕೆಯಾಗಿರುವ ಕಲ್ಲಿದ್ದಲಿನಲ್ಲಿ  ಶೇ 25ರಷ್ಟು ಮಾತ್ರ ಪೂರೈಕೆ ಆಗುತ್ತಿದೆ. ಆದರೂ ಗ್ರಾಹಕರಿಗೆ ವಿದ್ಯುತ್‌ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಈ ಬಗ್ಗೆ ಚಿಂತೆ ಬೇಡ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಭರವಸೆ ನೀಡಿದರು.

ವಿಧಾನ ಪರಿಷತ್ತಿನಲ್ಲಿ ಮಂಗಳವಾರ ಕಾಂಗ್ರೆಸ್‌ ಸದಸ್ಯೆ ಮೋಟಮ್ಮ ಅವರ ಪರವಾಗಿ ಐವನ್‌ ಡಿಸೋಜಾ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು. ಬೇಸಿಗೆಯಲ್ಲಿ ವಿದ್ಯುತ್‌ ಕೊರತೆ ಆಗದಂತೆ ನೋಡಿಕೊಳ್ಳುವ ಸಲುವಾಗಿ ಜಲಾಶಯಗಳಲ್ಲಿ ನೀರನ್ನು ಸಂಗ್ರಹಿಸಿಟ್ಟುಕೊಂಡಿದ್ದೇವೆ ಎಂದರು.

ವಿದ್ಯುತ್‌ ವ್ಯತ್ಯಯ ಸಮಸ್ಯೆ ಬಹುತೇಕ ಕಡಿಮೆ ಆಗಿದೆ. ರೈತರಿಗೆ ನಿತ್ಯ 6ರಿಂದ 7 ಗಂಟೆ ವಿದ್ಯುತ್‌ ಪೂರೈಸುವ ಮಾತನ್ನು ನಾವು ಉಳಿಸಿಕೊಳ್ಳುತ್ತೇವೆ. ಕೈಗಾರಿಕೆಗಳಿಗೂ ವಿದ್ಯುತ್‌ ಕೊರತೆ ಆಗದಂತೆ ನೋಡಿಕೊಳ್ಳುತ್ತೇವೆ. ಬೇಡಿಕೆಗಿಂತಲೂ ಹೆಚ್ಚು ವಿದ್ಯುತ್‌ ಉತ್ಪಾದನೆ ಮಾಡಲು ಕ್ರಮ ಕೈಗೊಂಡಿದ್ದೇವೆ ಎಂದರು.

ಶೀಘ್ರ ಸಂಪರ್ಕ ಯೋಜನೆ: ವಿದ್ಯುತ್‌ ಸಂಪರ್ಕ ನೀಡುವ ಪ್ರಕ್ರಿಯೆಯನ್ನು ಸುಗಮಗೊಳಿಸಲು ಶೀಘ್ರ ಸಂಪರ್ಕ ಯೋಜನೆಯನ್ನು ಜಾರಿಗೆ ತರಲಿದ್ದೇವೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲೂ ಅವಕಾಶ ಕಲ್ಪಿಸುತ್ತೇವೆ. ಸದ್ಯದಲ್ಲೇ ಈ ಯೋಜನೆಯ ಸಂಪೂರ್ಣ ವಿವರಗಳನ್ನು
ಬಿಡುಗಡೆ ಮಾಡಲಿದ್ದೇನೆ ಎಂದು ಇಂಧನ ಸಚಿವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT