ಗುರುವಾರ , ಆಗಸ್ಟ್ 22, 2019
26 °C

ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಾಳೆ ಶಾಲಾ–ಕಾಲೇಜುಗಳಿಗೆ ರಜೆ ಘೋಷಣೆ 

Published:
Updated:

ಉಡುಪಿ: ರಾಜ್ಯದ ಕರಾವಳಿ ಪ್ರದೇಶಗಳಲ್ಲಿ 210 ಮಿ.ಮೀ ಗಿಂತ ಹೆಚ್ಚು ಮಳೆ ಹಾಗೂ ಭಾರಿ ಗಾಳಿ ಬೀಸುವ ಸಂಭವವಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆ.9ರಂದು (ಶುಕ್ರವಾರ) ಜಿಲ್ಲೆಯ ಎಲ್ಲ ಶಾಲಾ ಕಾಲೇಜು, ಅಂಗನವಾಡಿಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. 

ಚಿಕ್ಕಮಗಳೂರು: 5 ತಾಲ್ಲೂಕುಗಳ ಶಾಲಾ-ಕಾಲೇಜಿಗಳಿಗೆ ರಜೆ 
ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದ್ದು, ಮುನ್ನೆಚ್ಚರಿಕೆಯಾಗಿ ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ ಮತ್ತು ಎನ್ಆರ್‌ ಪುರ ತಾಲ್ಲೂಕುಗಳ ಶಾಲಾ– ಕಾಲೇಜುಗಳಿಗೆ ಆ.9ರಂದು ರಜೆ ಘೋಷಿಸಲಾಗಿದೆ. 

ಮಳೆ ಜೋರಾಗಿದ್ದು ನದಿ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಮುಂಜಾಗ್ರತೆಯಾಗಿ ಐದು ತಾಲ್ಲೂಕುಗಳಲ್ಲಿ ಶಾಲಾ- ಕಾಲೇಜುಗಳಿಗೆ  ರಜೆ ನೀಡಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದ್ದಾರೆ.

Post Comments (+)