ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸಾಧ್ಯತೆ: 10 ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್'

Last Updated 26 ಮೇ 2020, 19:52 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಸೇರಿ 10 ಜಿಲ್ಲೆಗಳಲ್ಲಿ ಇದೇ 27 ಮತ್ತು 28ರಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಭಾಗಗಳ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಗುರುವಾರದವರೆಗೆ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದೆ.

ವಿಜಯಪುರ ಜಿಲ್ಲೆಯ ನಾಲತವಾಡದಲ್ಲಿ ಮಂಗಳವಾರ 6 ಸೆಂ.ಮೀ. ಮಳೆಯಾಗಿದೆ. ಶಿರಹಟ್ಟಿ, ಪಾಂಡವಪುರ, ಹೊಸದುರ್ಗ, ಶ್ರೀರಂಗಪಟ್ಟಣ 4, ಇಳಕಲ್, ಗದಗ, ಬೇಲೂರು, ಮೈಸೂರು 3, ಕುಷ್ಟಗಿ, ಶಿಗ್ಗಾಂವ, ಬೆಳ್ಳಟ್ಟಿ, ತಿಪಟೂರು, ಆನೇಕಲ್‌ನಲ್ಲಿ 2 ಸೆಂ.ಮೀ ಮಳೆಯಾಗಿದೆ.

ಇಂದಿನಿಂದ ಸುಡುಗಾಳಿ: ಬಾಗಲಕೋಟೆ, ಬೀದರ್, ಕಲಬುರ್ಗಿ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸುಡುಗಾಳಿ ಬೀಸಲಿದ್ದು, ಸಾರ್ವಜನಿಕರು ಬಿಸಿಲಿಗೆ ಮೈಯೊಡ್ಡದಂತೆ ಇಲಾಖೆ ಎಚ್ಚರಿಸಿದೆ. ಕಲಬುರ್ಗಿಯಲ್ಲಿ ಮಂಗಳವಾರ 44.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಹಾಗೂ ಮಡಿಕೇರಿಯಲ್ಲಿ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT