ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿನಿಂದ ಭಾರಿ ಮಳೆ ಸಾಧ್ಯತೆ

Last Updated 25 ಮೇ 2020, 20:08 IST
ಅಕ್ಷರ ಗಾತ್ರ

ಬೆಂಗಳೂರು: ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಇದೇ 26ರಿಂದ ಮೂರು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಹಾಗೂ ಹಾಸನದಲ್ಲಿ ಮಂಗಳವಾರ ಹೆಚ್ಚು ಮಳೆಯಾಗಲಿದ್ದು, 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ. ಮೇ 27ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಭಾರಿ ಮಳೆಯಾಗಲಿದೆ. 28ರಂದು ಚಾಮರಾಜನಗರ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿರುವ ಹಿನ್ನೆಲೆಯಲ್ಲಿ 'ಆರೆಂಜ್ ಅಲರ್ಟ್' ಘೋಷಿಸಿದೆ.

'ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ. ಅಲ್ಲಿವರೆಗೆ ಮುಂಗಾರು ಪೂರ್ವ ಮಳೆ ಸುರಿಯಲಿದೆ' ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಶ್ರೀನಿವಾಸ ರೆಡ್ಡಿ ತಿಳಿಸಿದರು.

ಮಂಡ್ಯ ಜಿಲ್ಲೆಯ ಹೊನಕೆರೆ ಹಾಗೂ ಬರಸಾಳಿನಲ್ಲಿ ಸೋಮವಾರ ತಲಾ 5 ಸೆಂ.ಮೀ ಮಳೆಯಾಗಿದೆ. ಬೆಂಗಳೂರು ನಗರ, ಕೆ.ಆರ್.ಪೇಟೆ, ಹಾಸನ, ಮಂಡ್ಯ, ಮೈಸೂರು 3, ಬೆಳ್ಳೂರು, ಶ್ರವಣಬೆಳಗೊಳ 2, ಟಿ.ನರಸೀಪುರ, ಸರಗೂರು ಹಾಗೂ ಪಿರಿಯಾಪಟ್ಟಣದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಕಲಬುರ್ಗಿಯಲ್ಲಿ 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಹಾಗೂ ಮಡಿಕೇರಿಯಲ್ಲಿ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT