ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಇದೇ 25ರಿಂದ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇದೇ 24ರಿಂದ 26ರವರೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ 25ರಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ ಜಿಲ್ಲೆಯ ಕದ್ರಾದಲ್ಲಿ ಮಂಗಳವಾರ 7 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಕಾರವಾರ 6, ಭಟ್ಕಳ, ಹೊನ್ನಾವರ 5, ಉಪ್ಪಿನಂಗಡಿ, ಶೃಂಗೇರಿ 4, ಸುಳ್ಯ, ಕೊಲ್ಲೂರು, ಮಂಗಳೂರು, ಕುಂದಾಪುರ, ಧರ್ಮಸ್ಥಳ, ಮೂಡುಬಿದ್ರೆ, ಪುತ್ತೂರು, ಗೋಕರ್ಣ, ಹೊಸನಗರದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.
ರಾಯಚೂರಿನಲ್ಲಿ 36 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಹಾಗೂ ಮಡಿಕೇರಿಯಲ್ಲಿ 23 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.