ಸೋಮವಾರ, ಸೆಪ್ಟೆಂಬರ್ 20, 2021
22 °C

ಮರ ಬಿದ್ದು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜಧಾನಿ ಬೆಂಗಳೂರು, ಮೈಸೂರು, ಚಾಮರಾಜನಗರ ಹಾಗೂ ಕೋಲಾರ ಜಿಲ್ಲೆಯ ಹಲವೆಡೆ ಶನಿವಾರ ಮಳೆಯಾಗಿದೆ. ಕೋಲಾರ ಜಿಲ್ಲೆ ಮುಳಬಾಗಿಲು ಸಮೀಪದ ತೊರಡಿ ಗ್ರಾಮದ ಬಳಿ ಮಳೆ–ಗಾಳಿಗೆ ಆಲದ ಮರ ಉರುಳಿ ಬಿದ್ದು ಪಾರ್ವತಮ್ಮ (40) ಎಂಬುವವರು ಮೃತಪಟ್ಟಿದ್ದಾರೆ.

ಮಳೆಯಿಂದ ರಕ್ಷಣೆ ಪಡೆಯಲು ಪಾರ್ವತಮ್ಮ ಅಶ್ವತ್ಥಕಟ್ಟೆ ಬಳಿ ನಿಂತಿದ್ದಾಗ ಈ ಅವಘಡ ನಡೆದಿದೆ. ತಹಶೀಲ್ದಾರ್ ಬಿ.ಎನ್.ಪ್ರವೀಣ್ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು.

ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಮಳೆಯಾಗಿದೆ. ಮೈಸೂರಿನಲ್ಲಿ ಗುಡುಗು ಸಹಿತ 15 ನಿಮಿಷ ಕಾಲ ಮಳೆಯಾಗಿದ್ದು, ಜಿಲ್ಲೆಯ ಪಿರಿಯಾಪಟ್ಟಣ, ಹುಣಸೂರು, ಕೆ.ಆರ್‌.ನಗರ, ತಿ.ನರಸೀಪುರ, ನಂಜನಗೂಡಿನಲ್ಲಿ ಸಾಧಾರಣವಾಗಿ ಸುರಿದಿದೆ.‌

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು