ಶಿರಾಡಿ ಘಾಟಿ: ಲಘು ವಾಹನಗಳಿಗೆ ಮಾತ್ರ ಪ್ರವೇಶ

7

ಶಿರಾಡಿ ಘಾಟಿ: ಲಘು ವಾಹನಗಳಿಗೆ ಮಾತ್ರ ಪ್ರವೇಶ

Published:
Updated:

ಮಂಗಳೂರು: ಶಿರಾಡಿ ಘಾಟಿ ಮಾರ್ಗದಲ್ಲಿ 15 ದಿನಗಳ ಕಾಲ ಲಘು ವಾಹನಗಳಿಗೆ ಮಾತ್ರ ಪ್ರವೇಶ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ. ಬಸ್ ಸೇರಿದಂತೆ ಘನ ವಾಹನಗಳ ಸಂಚಾರಕ್ಕೆ ನಿರ್ಬಂಧ ಮುಂದುವರಿಯಲಿದೆ.

ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕಾಗಿ ಜನವರಿ 20ರಿಂದ ಈ ಮಾರ್ಗವನ್ನು ಮುಚ್ಚಲಾಗಿತ್ತು. ಭಾನುವಾರ ಮಧ್ಯಾಹ್ನ ಮಾರ್ಗದಲ್ಲಿ ಪುನಃ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು.

ಆದರೆ, ರಸ್ತೆ ಬದಿ (ಶೋಲ್ಡರ್) ಸಮತಟ್ಟು ಮಾಡುವುದು ಮತ್ತು ತಡೆಗೋಡೆ ನಿರ್ಮಾಣ ಕಾಮಗಾರಿ ಬಾಕಿ ಇದೆ. ಈ ಕಾರಣದಿಂದ ದ್ವಿಚಕ್ರ ವಾಹನ, ಕಾರುಗಳು ಮತ್ತು ಪ್ರಯಸಣಿಕರ ಟೆಂಪೊ ಟ್ರಾವೆಲ್ಲರ್ ಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡುವ ನಿರ್ಧಾರವನ್ನು ಉನ್ನತಮಟ್ಟದ ಸಭೆಯಲ್ಲಿ ಕೈಗೊಳ್ಳಲಾಗಿದೆ. ಗಂಟೆಗೆ 50 ಕಿ.ಮೀ. ವೇಗಮಿತಿ ನಿಗದಿ ಮಾಡಲಾಗಿದೆ. ವಾಹನ ಸಂಚಾರದ ಮೇಲೆ ನಿಗಾ ಇರಿಸಲು ಕಾಂಕ್ರೀಟ್ ರಸ್ತೆಯ ಹಲವೆಡೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ನಿರ್ಧರಿಸಲಾಗಿದೆ.

ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮತ್ತು ಎಸ್ ಪಿ ಡಾ.ಬಿ.ಅರ್.ರವಿಕಾಂತೇಗೌಡ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !