ಶುಕ್ರವಾರ, ಡಿಸೆಂಬರ್ 6, 2019
25 °C
ಮಂಗಳೂರು: ಜ. 22ರಂದು ಪ್ರದಾನ

ಪ್ರಸನ್ನ, ಹನೀಫ್‌ ಸಹಿತ 5 ಮಂದಿಗೆ ಸಂದೇಶ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ನಗರದ ಸಂದೇಶ ಪ್ರತಿಷ್ಠಾನದ 2019ನೇ ಸಾಲಿನ ಸಂದೇಶ ಪ್ರಶಸ್ತಿಗೆ ಸಾಹಿತಿ ಪ್ರಸನ್ನ ಹೆಗ್ಗೋಡು, ‘ಪ್ರಜಾವಾಣಿ’ಯ ಸಹ ಸಂಪಾದಕ ಬಿ.ಎಂ.ಹನೀಫ್ ಸಹಿತ ಐದು ಮಂದಿ ಆಯ್ಕೆಯಾಗಿದ್ದಾರೆ.

ಬಿ.ಎಂ. ರೋಹಿಣಿ (ಶಿಕ್ಷಣ), ಫಾ.ಬೆನ್‌ ಬ್ರಿಟ್ಟೊ ಪ್ರಭು (ಸಂಗೀತ), ಮಂಜಮ್ಮ ಜೋಗತಿ(ಕಲೆ) ಪ್ರಶಸ್ತಿಗೆ ಆಯ್ಕೆಯಾದ ಇತರರು. ಸಂದೇಶ ವಿಶೇಷ ಪ್ರಶಸ್ತಿಗೆ ಸ್ನೇಹಸದನ್, ಜೀವದಾನ್ ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ ಎಂದು ಆಯ್ಕೆ ಸಮಿತಿ ಅಧ್ಯಕ್ಷ ನಾ.ಡಿಸೋಜ ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪ್ರಶಸ್ತಿ ₹ 25 ಸಾವಿರ ನಗದು ಒಳಗೊಂಡಿದೆ. ಜನವರಿ 22ರಂದು ನಗರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೇಳಿದರು.

ಪ್ರತಿಕ್ರಿಯಿಸಿ (+)