ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಎಸ್‌ಡಬ್ಲ್ಯುಗೆ ಜಾಕ್ವೆಸ್‌ ಕೋಚ್‌

Last Updated 29 ಮೇ 2018, 19:30 IST
ಅಕ್ಷರ ಗಾತ್ರ

ಸಿಡ್ನಿ: ಆಸ್ಟ್ರೇಲಿಯಾದ ಹಿರಿಯ ಕ್ರಿಕೆಟಿಗ ಫಿಲ್‌ ಜಾಕ್ವೆಸ್‌ ಅವರು ಸೋಮವಾರ ನ್ಯೂ ಸೌತ್‌ವೇಲ್ಸ್‌ (ಎನ್‌ಎಸ್‌ಡಬ್ಲ್ಯು) ತಂಡದ ಮುಖ್ಯ ಕೋಚ್‌ ಆಗಿ ನೇಮಕವಾಗಿದ್ದಾರೆ.

2017–18ನೇ ಋತುವಿನ ಶೆಫೀಲ್ಡ್‌ ಶೀಲ್ಡ್‌ ಟೂರ್ನಿಯಲ್ಲಿ ಎನ್‌ಎಸ್‌ಡಬ್ಲ್ಯು ತಂಡ ಉತ್ತಮ ಸಾಮರ್ಥ್ಯ ತೋರಲು ವಿಫಲವಾಗಿತ್ತು. ಹೀಗಾಗಿ ಮುಖ್ಯ ಕೋಚ್‌ ಟ್ರೆಂಟ್‌ ಜಾನ್ಸ್‌ಟನ್‌ ಅವರನ್ನು ವಜಾ ಮಾಡಲಾಗಿತ್ತು.

ಜಾಕ್ವೆಸ್‌ ಅವರು ಆಸ್ಟ್ರೇಲಿಯಾ ತಂಡದ ಪರ 11 ಟೆಸ್ಟ್‌ ಮತ್ತು 6 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್‌ನಲ್ಲಿ ಅವರು 902ರನ್‌ಗಳನ್ನು ದಾಖಲಿಸಿದ್ದಾರೆ. ಏಕದಿನ ಮಾದರಿಯಲ್ಲಿ 125ರನ್‌ಗಳನ್ನು ಪೇರಿಸಿದ್ದಾರೆ.

ಶೆಫೀಲ್ಡ್‌ ಶೀಲ್ಡ್‌ ಟೂರ್ನಿಯಲ್ಲಿ ನ್ಯೂ ಸೌತ್‌ ವೇಲ್ಸ್‌ ಪರ 76 ಪಂದ್ಯಗಳನ್ನು ಆಡಿರುವ ಫಿಲ್‌ ಅವರಿಗೆ 200 ಪ್ರಥಮ ದರ್ಜೆ ಪಂದ್ಯಗಳಲ್ಲಿ ಪಾಲ್ಗೊಂಡ ಅನುಭವವೂ ಇದೆ. ಕೌಂಟಿ ಕ್ರಿಕೆಟ್‌ ಚಾಂಪಿಯನ್‌ಷಿಪ್‌ನಲ್ಲಿ ಅವರು ನಾರ್ಥಂಪ್ಟನ್‌ಶೈರ್‌, ವಾರ್ಷೆಸ್ಟರ್‌ಶೈರ್‌ ಮತ್ತು ಯಾರ್ಕ್‌ಶೈರ್‌ ತಂಡಗಳನ್ನು ಪ್ರತಿನಿಧಿಸಿದ್ದರು.

‘ಕ್ಲಬ್‌ನಲ್ಲಿರುವ ಯುವ ಆಟಗಾರರ ಪ್ರತಿಭೆಗೆ ಸಾಣೆ ಹಿಡಿದು ಅವರು ಆಸ್ಟ್ರೇಲಿಯಾ ತಂಡವನ್ನು ಪ್ರತಿನಿಧಿಸುವಂತೆ ಮಾಡುವ ಮಹತ್ವದ ಜವಾಬ್ದಾರಿ ನನ್ನ ಮೇಲಿದೆ. ಅದನ್ನು ಯಶಸ್ವಿಯಾಗಿ ನಿಭಾಯಿಸುತ್ತೇನೆ’ ಎಂದು ಫಿಲ್‌ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT