ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರಿಗೆ ವಾಯುಪಡೆ ಹೆಲಿಕಾಪ್ಟರ್ ತರಬೇತಿ ಕೇಂದ್ರ

Last Updated 28 ಡಿಸೆಂಬರ್ 2018, 18:19 IST
ಅಕ್ಷರ ಗಾತ್ರ

ಮೈಸೂರು: ಬೆಂಗಳೂರು ಯಲಹಂಕದಲ್ಲಿರುವ ವಾಯುಪಡೆ ಹೆಲಿಕಾಪ್ಟರ್‌ ತರಬೇತಿ ವಿಭಾಗವನ್ನು ಮೈಸೂರಿಗೆ ಸ್ಥಳಾಂತರ ಮಾಡಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ನಾಗರಿಕ ವಿಮಾನಯಾನ ಸಚಿವ ಸುರೇಶ್‌ ಪ್ರಭು ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ್ದು, ರಾಜ್ಯದ ವಿವಿಧ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚಿಸಿದ್ದಾರೆ. ಅಲ್ಲದೇ, ಹೆಲಿಕಾಪ್ಟರ್‌ ತರಬೇತಿ ವಿಭಾಗವನ್ನು ಮೈಸೂರಿಗೆ ಸ್ಥಳಾಂತರ ಮಾಡಬೇಕು ಎನ್ನುವ ವಾಯುಪಡೆಯ ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ.

ಶ್ರೀನಗರ, ಪುಣೆ, ಚಂಡೀಗಡ ಮಾದರಿಯಲ್ಲಿ ಮೈಸೂರು ವಿಮಾನ ನಿಲ್ದಾಣವನ್ನು ತನ್ನದೇ ವೆಚ್ಚದಲ್ಲಿ ಅಭಿವೃದ್ಧಿಪಡಿಸುವುದು. ನಾಗರಿಕರ ಹಾಗೂ ಮಿಲಿಟರಿ ಬಳಕೆಗೆ ಅಗತ್ಯವಿರುವ ಸೌಕರ್ಯಗಳನ್ನು ಕಲ್ಪಿಸಲು ವಾಯುಪಡೆ ಸಮ್ಮತಿಸಿದೆ. ಇದಕ್ಕೆ ರಾಜ್ಯ ಸರ್ಕಾರನಿರಕ್ಷೇಪಣಾ ಪತ್ರವನ್ನು ನೀಡಿದೆ.

ವಿಮಾನ ನಿಲ್ದಾಣ ಪ್ರಾಧಿಕಾರದ ಸ್ವಾಧೀನದಲ್ಲಿ ಮೈಸೂರು ನಿಲ್ದಾಣವಿದೆ. ಭಾರತೀಯ ವಾಯುಪ‍ಡೆಗೆ ಸ್ಥಳಾಂತರಿಸಿ ಹೆಲಿಕಾಪ್ಟರ್ ತರಬೇತಿ ಕಾರ್ಯಕ್ಕೆ ಬಳಸಿಕೊಂಡು, ಅಭಿವೃದ್ಧಿಪಡಿಸುವಂತೆ ಪ್ರಾಧಿಕಾರಕ್ಕೆ ಸೂಚನೆ ನೀಡುವಂತೆ ಸರ್ಕಾರವು ಮನವಿ ಸಲ್ಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT