ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿನ್ನೋಟ 2018: ಹೈಕೋರ್ಟ್‌ ಅಂಗಳದಲ್ಲಿ....

Last Updated 29 ಡಿಸೆಂಬರ್ 2018, 19:45 IST
ಅಕ್ಷರ ಗಾತ್ರ

ಅಬ್ಬಾ... ನೋಡ, ನೋಡುತ್ತಲೇ 2018 ಕಳೆದು ಹೋಯಿತಲ್ಲ. ಸಿಹಿ-ಕಹಿ ನೆನಪುಗಳ ಜತೆಗೆ ಮತ್ತೊಂದು ಹೊಸ ವರ್ಷಕ್ಕೆ ಕಾಲಿಸಿರಿಸುತ್ತಿದ್ದೇವೆ. ಕಳೆದು ಹೋದ ವರ್ಷದತ್ತ ಹಿನ್ನೋಟ ಹರಿಸಿದಾಗ ಹಲವು ಘಟನೆಗಳು ಕಣ್ಮುಂದೆ ಸುಳಿಯುತ್ತವೆ.

* ಫೆಬ್ರುವರಿ 14 ರಂದು ಐವರು ವಕೀಲರು ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ. ಇದೇ ತಿಂಗಳ 24ರಂದು ಮೇಘಾಲಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ.

* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಸಾರ್ವಜನಿಕ ಪ್ರದೇಶದಲ್ಲಿ ಫ್ಲೆಕ್ಸ್, ಬ್ಯಾನರ್ ಸೇರಿದಂತೆ ಎಲ್ಲ ರೀತಿಯ ಜಾಹೀರಾತು ಫಲಕಗಳ ತೆರವಿಗೆ ಕಟ್ಟು ನಿಟ್ಟಿನ ಆದೇಶ.

ಅಂತೆಯೇ ರಸ್ತೆಗುಂಡಿ ಭರ್ತಿ, ಕಸ ವಿಲೇವಾರಿ ಕುರಿತ ಪ್ರಕರಣಗಳಲ್ಲಿ ಬಿಬಿಎಂಪಿಗೆ ಚಾಟಿ ಬೀಸುವ ಮೂಲಕ ಬೆಂಗಳೂರು ಗತ ವೈಭವ ಮರುಕಳಿಸಬೇಕು ಎಂದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ನೇತೃತ್ವದ ವಿಭಾಗೀಯ ನ್ಯಾಯಪೀಠ.

* ‘ಮಾತೆತ್ತಿದರೆ ಜೈಲಿಗೆ ಹೋಗಿ ಬಂದವರು ಎಂದು ಟೀಕಿಸುವ ಸಿದ್ದರಾಮಯ್ಯ ನ್ಯಾಯಾಂಗ ನಿಂದನೆ ಮಾಡುತ್ತಿದ್ದು, ವೈಯಕ್ತಿಕವಾಗಿ ನನ್ನ ಮಾನಹಾನಿಗೆ ಕಾರಣರಾಗಿದ್ದಾರೆ’ ಎಂದು ಆರೋಪಿಸಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಂದ ರಿಟ್ ಅರ್ಜಿ ಸಲ್ಲಿಕೆ.

* ಪೌರಕಾರ್ಮಿಕರಿಗೆ ಪಾವತಿಸಿಬೇಕಿದ್ದ ಸುಮಾರು ₹ 550 ಕೋಟಿ ಇಎಸ್‌ಐ ಹಾಗೂ ಪಿಎಫ್ ಹಣ ಗುಳುಂ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ದಾಖಲೆ ಒದಗಿಸುವಂತೆ ಸೂಚಿಸಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಜಾರಿಗೊಳಿಸಿದ್ದ ನೋಟಿಸ್ ರದ್ದತಿಗೆ ಕೋರಿ ಬಿಬಿಎಂಪಿ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಗಳ ವಜಾ.

* ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಎ.ಎಸ್‌.ಪೊನ್ನಣ್ಣ, ಲಕ್ಷ್ಮಿ ಅಯ್ಯಂಗಾರ್ ಹಾಗೂ ಜಯ್ನಾ ಕೊಠಾರಿ ಸೇರಿದಂತೆ ಹೈಕೋರ್ಟ್‌ನ 18 ವಕೀಲರನ್ನು ‘ಹಿರಿಯ ವಕೀಲ’ರನ್ನಾಗಿ ನಿಯುಕ್ತಿಗೊಳಿಸಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಆದೇಶ.

* ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಪದವಿ ಪಡೆದ ವಿದ್ಯಾರ್ಥಿಗಳು, ಮೂರು ವರ್ಷ ಸರ್ಕಾರಿ ಸೇವೆ ಸಲ್ಲಿಸುತ್ತೇವೆ ಎಂದು ಪ್ರವೇಶಾತಿ ಸಂದರ್ಭದಲ್ಲಿ ಮಾಡಿಕೊಂಡ ಒಪ್ಪಂದಕ್ಕೆ ಅನುಗುಣವಾಗಿ ನಡೆಯದೆ ಮತ್ತು ನಿಗದಿತ ದಂಡ ಪಾವತಿಸದಿರುವ ಪ್ರಕಾರಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು’ ಎಂದು ರಾಜ್ಯ ಸರ್ಕಾರಕ್ಕೆ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಆದೇಶ.

* ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT