ಶುಕ್ರವಾರ, ಡಿಸೆಂಬರ್ 6, 2019
20 °C

ಗರ್ಭಿಣಿಯರ ಸಾವು ಸರ್ಕಾರಕ್ಕೆ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ವೈದ್ಯರು ಲಭಿಸದೆ ಗರ್ಭಿಣಿಯರು ಸಾವನ್ನಪ್ಪಿದರೆ ಅಂತಹವರ ಕುಟುಂಬಗಳಿಗೆ ಸರ್ಕಾರವೇ ಪರಿಹಾರ ನೀಡಬೇಕಾಗುತ್ತದೆ’ ಎಂದು ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಎಚ್ಚರಿಸಿದೆ.

ಈ ಕುರಿತಂತೆ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ‘ರಾಜ್ಯದ ಜಿಲ್ಲಾ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಸೂತಿ ತಜ್ಞರು, ಮಕ್ಕಳ ತಜ್ಞ ವೈದ್ಯರೂ ಸೇರಿದಂತೆ ವೈದ್ಯಕೀಯ ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಯ ಕೊರತೆ ಇದೆ’ ಎಂಬ ದೂರಿನ ಬಗ್ಗೆ ನ್ಯಾಯಪೀಠ, ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

‘ಖಾಲಿ ಹುದ್ದೆಗಳನ್ನು ಕಾಲಮಿತಿಯೊಳಗೆ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು’ ಎಂದು ತಾಕೀತು ಮಾಡಿದ ನ್ಯಾಯಪೀಠ, ಈ ಸಂಬಂಧ ಒಂದು ವಾರದಲ್ಲಿ ಆದೇಶ ಹೊರಡಿಸುವುದಾಗಿ ತಿಳಿಸಿ ವಿಚಾರಣೆ ಮುಂದೂಡಿದೆ.

ಪ್ರತಿಕ್ರಿಯಿಸಿ (+)