ಶುಕ್ರವಾರ, ಏಪ್ರಿಲ್ 10, 2020
19 °C

ಕಾರಾಗೃಹಗಳ ವಸ್ತುಸ್ಥಿತಿಗೆ ಹೈಕೋರ್ಟ್ ಅತೃಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿನ ಕಾರಾಗೃಹಗಳ ವಸ್ತುಸ್ಥಿತಿಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಕಾರಾಗೃಹಗಳಲ್ಲಿನ ಪರಿಸ್ಥಿತಿ ಅವಲೋಕನಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಕಾರಾಗೃಹಗಳಿಗೆ ಮಂಜೂರಾಗಿರುವ ಒಟ್ಟು ಸಿಬ್ಬಂದಿ, ಸದ್ಯ ಖಾಲಿಯಿರುವ ಸಿಬ್ಬಂದಿ ಪ್ರಮಾಣ, ಜೈಲಿನಲ್ಲಿರುವ ಕೈದಿಗಳ ಮಕ್ಕಳಿಗೆ ಸೂಕ್ತ ಶಿಕ್ಷಣ ಕಲ್ಪಿಸುವ ವಿಚಾರ ಹಾಗೂ ಕೈದಿಗಳಿಗೆ ಒದಗಿಸುತ್ತಿರುವ ಆಹಾರದ ಗುಣಮಟ್ಟ, ಅಡುಗೆ ಮನೆಯ ನೈರ್ಮಲ್ಯದ ಬಗ್ಗೆ ಸೂಕ್ತ ಮಾಹಿತಿ  ನೀಡದ ಸರ್ಕಾರದ ವೈಖರಿಗೆ ನ್ಯಾಯಪೀಠ ಅತೃಪ್ತಿ ವ್ಯಕ್ತಪಡಿಸಿತು.

‘ಈ ಕುರಿತು ಸಮಗ್ರ ಮಾಹಿತಿಯನ್ನು ಡಿ.16ರ ಒಳಗೆ ಒದಗಿಸಬೇಕು’ ಎಂದು ಸೂಚಿಸಿ ವಿಚಾರಣೆ ಮುಂದೂಡಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು