ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕರ ಹಾಜರಿಗೆ ಹೇಬಿಯಸ್‌ ಕಾರ್ಪಸ್‌

Last Updated 8 ಫೆಬ್ರುವರಿ 2019, 18:13 IST
ಅಕ್ಷರ ಗಾತ್ರ

ಬೆಂಗಳೂರು: ‘ಅಥಣಿ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ ಕುಮಟಳ್ಳಿ ಅವರನ್ನು ಗೋಕಾಕ ಕ್ಷೇತ್ರದ ಶಾಸಕ ರಮೇಶ ಜಾರಕಿಹೊಳಿ ಅಕ್ರಮ ಬಂಧನದಲ್ಲಿಟ್ಟುಕೊಂಡಿದ್ದಾರೆ. ಕೂಡಲೇ ಅವರನ್ನು ಪತ್ತೆ ಹಚ್ಚಿ ಕೋರ್ಟ್‌ ಮುಂದೆ ಹಾಜರುಪಡಿಸಲು ಪೊಲೀಸರಿಗೆ ನಿರ್ದೇಶಿಸಬೇಕು’ ಎಂದು ಕೋರಿ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಲಾಗಿದೆ.

ಬೆಳಗಾವಿ ಜಿಲ್ಲೆ ಅಥಣಿಯ ವಕೀಲ ಹಾಗೂ ಯುವ ಕಾಂಗ್ರೆಸ್ ಕಾರ್ಯದರ್ಶಿ ಪ್ರಮೋದ ದಯಾನಂದ ಹಿರೇಮನಿ ಈ ಅರ್ಜಿ ಸಲ್ಲಿಸಿದ್ದಾರೆ.

ಇನ್ನೂ ವಿಚಾರಣೆಗೆ ಬರಬೇಕಿರುವ ಈ ಅರ್ಜಿಯಲ್ಲಿ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ಅಥಣಿ ಪೊಲೀಸ್‌ ಠಾಣಾಧಿಕಾರಿ,
ಶಾಸಕರಾದ ಮಹೇಶ್‌ ಈರನಗೌಡ ಕುಮಟಳ್ಳಿ ಹಾಗೂ ರಮೇಶ್‌ ಜಾರಕಿಹೊಳಿ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT