ಹತ್ತಕ್ಕೂ ಹೆಚ್ಚು ಸ್ಥಳೀಯ ಸಂಸ್ಥೆಗಳ ಚುನಾವಣಾ ಅಧಿಸೂಚನೆ ರದ್ದು

7

ಹತ್ತಕ್ಕೂ ಹೆಚ್ಚು ಸ್ಥಳೀಯ ಸಂಸ್ಥೆಗಳ ಚುನಾವಣಾ ಅಧಿಸೂಚನೆ ರದ್ದು

Published:
Updated:

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿ ನಿಗದಿಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಅಂತಿಮ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಈ ಕುರಿತಂತೆ ಸಲ್ಲಿಸಲಾಗಿದ್ದ 30ಕ್ಕೂ ಹೆಚ್ಚು ಅರ್ಜಿಗಳಲ್ಲಿ ಹತ್ತಕ್ಕೂ ಹೆಚ್ಚು ಪಟ್ಟಣ ಪಂಚಾಯ್ತಿ ಮತ್ತು ನಗರಸಭೆಗಳಿಗೆ ಹೊಸ ಅಧಿಸೂಚನೆ ಹೊರಡಿಸಲು ಆದೇಶಿಸಲಾಗಿದೆ.

ಈ ಕುರಿತಂತೆ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಸ್.ಸುನಿಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿದೆ.

ರಾಜ್ಯದಾದ್ಯಂತ 26 ಜಿಲ್ಲೆಗಳಲ್ಲಿನ 2,593 ಸ್ಥಳೀಯ ಸಂಸ್ಥೆಯ ವಾರ್ಡ್‌ಗಳಿಗೆ 2019ರ ಮಾರ್ಚ್‌ನಲ್ಲಿ ಅಧಿಕಾರವಧಿ ‍ಪೂರ್ಣಗೊಳ್ಳುತ್ತಿದ್ದು, ಚುನಾವಣೆ ನಡೆಸಬೇಕಿದೆ.

ಆಕ್ಷೇಪ ಏನು?: ‘ಕ್ಷೇತ್ರ ಮರು ವಿಂಗಡಣೆ ಹಾಗೂ ವಾರ್ಡ್‌ವಾರು ಮೀಸಲು ನಿಗದಿಪಡಿಸುವಾಗ ಸರ್ಕಾರ ಮಾರ್ಗಸೂತ್ರಗಳನ್ನು ಅನುಸರಿಸಿಲ್ಲ. ಸಂವಿಧಾನದ ವಿಧಿ 243 (ಟಿ) ಪ್ರಕಾರ ಮೀಸಲು ಹೇಗಿರಬೇಕು ಎಂಬುದನ್ನು ವಿವರಿಸಲಾಗಿದೆ. ಆದರೆ ಅದನ್ನು ಸರ್ಕಾರ ಪಾಲನೆ ಮಾಡಿಲ್ಲ‌’ ಎಂದು ಆಕ್ಷೇಪಿಸಿ ಅರ್ಜಿದಾರರು ಹೈಕೋರ್ಟ್ ಮೊರೆ ಹೊಕ್ಕಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !