ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಂಎ ತನಿಖೆ ನಿಧಾನಗತಿ: ಹೈಕೋರ್ಟ್ ಕಿಡಿ

Last Updated 31 ಅಕ್ಟೋಬರ್ 2019, 7:27 IST
ಅಕ್ಷರ ಗಾತ್ರ

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆ ನಿಧಾನಗತಿಯಲ್ಲಿ ಸಾಗಿದೆಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

‘ಆ್ಯಂಬಿಡೆಂಟ್, ಇಂಜಾಸ್ ಸೇರಿದಂತೆ 9 ವಂಚಕ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರ ಬರೆದ ಪತ್ರಕ್ಕೆ ಜಿಲ್ಲಾಧಿಕಾರಿ ಸ್ವಂದಿಸಿಲ್ಲ’ಎಂದು ನ್ಯಾಯಪೀಠ ಕಿಡಿ ಕಾರಿದೆ.

ಸರ್ಕಾರ ಇಷ್ಟೊಂದು ಅಸಹಾಯಕ ಆಗಬಾರದು. ಜಿಲ್ಲಾಧಿಕಾರಿ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ ಎಂದೂ ಪ್ರಶ್ನಿಸಿದೆ.

ಸರ್ಕಾರದ ಪತ್ರಕ್ಕೆ ಸ್ಪಂದಿಸದ ಜಿಲ್ಲಾಧಿಕಾರಿ ಸೇರಿದಂತೆ 9 ವಂಚಕ ಕಂಪನಿಗಳ ವಿರುದ್ಧ ಕೆಪಿಐಡಿ ಕಾಯ್ದೆ 2004 ಪ್ರಕಾರ ಕ್ರ‌ಮ ಕೈಗೊಳ್ಳಿ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಪ್ರಗತಿ ವರದಿಯನ್ನು ಸಲ್ಲಿಸಿ ಎಂದು ಸರ್ಕಾರಕ್ಕೆ ನಿರ್ದೇಶಿಸಿದ ನ್ಯಾಯಪೀಠ, ವಿಚಾರಣೆಯನ್ನು ನವೆಂಬರ್ 22ಕ್ಕೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT