ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳವಣಿಗೆ ನ್ಯೂನತೆ | 22 ವಾರಗಳ ಭ್ರೂಣದ ಗರ್ಭಪಾತಕ್ಕೆ ಹೈಕೋರ್ಟ್ ಅನುಮತಿ

Last Updated 4 ಮೇ 2020, 21:00 IST
ಅಕ್ಷರ ಗಾತ್ರ

ಬೆಂಗಳೂರು: '22 ವಾರಗಳ ಭ್ರೂಣದ ಬೆಳವಣಿಗೆ ನ್ಯೂನತೆಯಿಂದ ಕೂಡಿದೆ' ಎಂಬ ಕಾರಣಕ್ಕೆ ಗರ್ಭಪಾತಕ್ಕೆ ಅನುಮತಿ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ಮಾನ್ಯ ಮಾಡಿದೆ.

ಈ ಕುರಿತಂತೆ ನಗರದ 32 ವರ್ಷದ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

'ತಜ್ಞ ವೈದ್ಯರ ವರದಿ ಆಧರಿಸಿ ಮಹಿಳೆ ಸ್ವಂತ ಖರ್ಚಿನಲ್ಲಿ ಗರ್ಭಪಾತ ಮಾಡಿಸಿಕೊಳ್ಳಬೇಕು' ಎಂದು ನ್ಯಾಯಪೀಠ ಆದೇಶಿಸಿದೆ.

'ಒಂದು ವೇಳೆ ಗರ್ಭಪಾತದಿಂದ ಭವಿಷ್ಯದಲ್ಲಿ ಯಾವುದೇ ತೊಂದರೆ ಎದುರಿಸಬೇಕಾಗಿ ಬಂದರೂ ಅದಕ್ಕೆ ಅರ್ಜಿದಾರರೇ ನೇರ ಹೊಣೆಯಾಗಿರುತ್ತಾರೆ' ಎಂದೂ ಇದೇ ವೇಳೆ ಸ್ಪಷ್ಟಪಡಿಸಿದೆ.

'ಖಾಸಗಿ ಆಸ್ಪತ್ರೆಯಲ್ಲಿ ನಡೆಸಿದ್ದ ಅಲ್ಟ್ರಾಸೌಂಡ್ ಸ್ಕಾೃನಿಂಗ್ ವರದಿಯಲ್ಲಿ, ಭ್ರೂಣದ ಶ್ವಾಸಕೋಶ ಸರಿಯಾಗಿ ಬೆಳವಣಿಗೆಯಾಗಿಲ್ಲ. ಕರುಳಿಗೆ ರಕ್ತ ಸಂಚಲನವಿಲ್ಲ. ಹೃದಯವೂ ನ್ಯೂನತೆಯಿಂದ ಕೂಡಿದೆ. ಹೆರಿಗೆ ವೇಳೆ ಮಗು ಬದುಕುವ ಸಾಧ್ಯತೆ ತೀರಾ ಕಡಿಮೆ ಇದ್ದು, ತಾಯಿಯ ಜೀವಕ್ಕೂ ಅಪಾಯ ಇದೆ' ಎಂದು ವೈದ್ಯರು ತಿಳಿಸಿದ್ದರು.

ಇದರಿಂದಾಗಿ ಮಹಿಳೆ ಗರ್ಭಪಾತಕ್ಕೆ ಅನುಮತಿ ಕೋರಿ ಏಪ್ರಿಲ್ 24ರಂದು ರಿಟ್ ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT