ಕೊಡಗು ಪ್ರವಾಹ: ನ್ಯಾಯಾಂಗ ತನಿಖೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

7

ಕೊಡಗು ಪ್ರವಾಹ: ನ್ಯಾಯಾಂಗ ತನಿಖೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

Published:
Updated:

ಬೆಂಗಳೂರು: ‘ಇತ್ತೀಚೆಗೆ ಕೊಡಗಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖಾ ಆಯೋಗ ರಚಿಸಬೇಕು’ ಎಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ‌ ಅರ್ಜಿಯನ್ನು (ಪಿಐಎಲ್) ಹೈಕೋರ್ಟ್‌ ವಜಾಗೊಳಿಸಿದೆ.

ಕೊಡಗು ಜಿಲ್ಲೆಯ ಜೆ.ಎಸ್‌.ವಿರೂಪಾಕ್ಷಯ್ಯ ಸಲ್ಲಿಸಿದ್ದ ಈ ಪಿಐಎಲ್ ಅನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

‘ಇದು ಪಿಐಎಲ್ ವ್ಯಾಪ್ತಿಗೆ ಒಳಪಡುವುದಿಲ್ಲ’ ಎಂಬ ಕಾರಣ ನೀಡಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿತು.

ಅರ್ಜಿದಾರರ ಕೋರಿಕೆ ಏನಿತ್ತು?: ‘ಮಳೆಯಿಂದಾಗಿ ಕೊಡಗು ಜಿಲ್ಲೆಯ 32ಕ್ಕೂ ಹೆಚ್ಚು ಗ್ರಾಮಗಳಲ್ಲಿನ ಮನೆ, ರಸ್ತೆಗಳು ಕೊಚ್ಚಿಕೊಂಡು ಹೋಗಿವೆ. ಸಾಕಷ್ಟು ಪ್ರಮಾಣದ ಆಸ್ತಿ-ಪಾಸ್ತಿ, ಬೆಳೆ ಹಾಗೂ ಜನ ಜಾನುವಾರುಗಳ ಜೀವಕ್ಕೆ ಹಾನಿಯಾಗಿದೆ. ಆದ್ದರಿಂದ ಜಿಲ್ಲೆಯ‌‌ ನೆರೆ ಪರಿಸ್ಥಿತಿ‌ಯನ್ನು ಸಂಪೂರ್ಣವಾಗಿ ಅಧ್ಯಯನ ಮಾಡಿ ವರದಿ ಹಾಗೂ ಶಿಫಾರಸು ಸಲ್ಲಿಸಲು ನ್ಯಾಯಾಂಗ ತನಿಖಾ ಆಯೋಗ ರಚಿಸಬೇಕು’ ಎಂದು ಅರ್ಜಿದಾರರು ಕೋರಿದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !