ಗುರುವಾರ , ಏಪ್ರಿಲ್ 9, 2020
19 °C

ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಕಾರ್ಯಾಚರಣೆ: ಬಂದೋಬಸ್ತ್‌ಗೆ ನಿರ್ದೇಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಸಾರ್ವಜನಿಕ ಪ್ರದೇಶಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿರುವ ಧಾರ್ಮಿಕ ಕಟ್ಟಡಗಳ ತೆರವಿಗೆ ಮುಂದಾಗುವ ಅಧಿಕಾರಿಗಳಿಗೆ ಸಾರ್ವಜನಿಕರಿಂದ ತೀವ್ರ ಪ್ರತಿರೋಧ ವ್ಯಕ್ತ ವಾಗುತ್ತಿದ್ದು, ಕಾರ್ಯಾಚರಣೆ ಸಂದರ್ಭದಲ್ಲಿ ಬಂದೋಬಸ್ತ್‌ಗೆ ಸಶಸ್ತ್ರ ಪೊಲೀಸ್‌ ಸಿಬ್ಬಂದಿ ಅಗತ್ಯವಿದೆ’ ಎಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತಂತೆ ಹೈಕೋರ್ಟ್, ಸ್ವಯಂಪ್ರೇರಿತವಾಗಿ ದಾಖಲಿಸಿ ಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್. ಓಕಾ ಹಾಗೂ ಅಶೋಕ್‌ ಎಸ್. ಕಿಣಗಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಬಿಬಿಎಂಪಿ ಪರ ವಾದ ಮಂಡಿಸಿದ ಹಿರಿಯ ವಕೀಲ ಅನಂತ ಮಂಡಗಿ, ‘ಇತ್ತೀಚೆಗೆ ಶ್ರೀರಾಮಪುರದ ಗಂಗೈಯಮ್ಮನ ದೇವಸ್ಥಾನದ ಒತ್ತುವರಿ ತೆರವಿಗೆ ಹೋಗಿದ್ದಾಗ ಅಧಿಕಾರಿಗಳ ಮೇಲೆ ಸ್ಥಳೀಯರು ದಾಳಿ ನಡೆ ಸಲು ಮುಂದಾಗಿದ್ದರು’ ಎಂದು ಪೀಠದ ಗಮನಕ್ಕೆ ತಂದರು. ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್‌ ಅವರೂ ದನಿಗೂಡಿಸಿದರು.

‘ವಿಧಾನಸಭೆ ಅಧಿವೇಶನ ಮುಗಿಯುವತನಕ ಭದ್ರತೆ ನೀಡಲು ಸಾಧ್ಯವಾಗುವುದಿಲ್ಲ ಎನ್ನುತ್ತಿದ್ದಾರೆ’ ಎಂದರು.

‘ಅಧಿವೇಶನದ ನೆಪದಲ್ಲಿ ಪೊಲೀಸರು ಭದ್ರತೆ ನೀಡಲು ನಿರಾಕರಿಸುವಂತಿಲ್ಲ. ನಗರ ಪೊಲೀಸ್ ಆಯುಕ್ತರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಪೀಠ ನಿರ್ದೇಶಿಸಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು