ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಟಿಇ: ತಿದ್ದುಪಡಿ ಪ್ರಶ್ನಿಸಿದ ಪಿಐಎಲ್‌

Last Updated 4 ಏಪ್ರಿಲ್ 2019, 19:02 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರವು, ಶಿಕ್ಷಣ ಹಕ್ಕು ಕಾಯ್ದೆಗೆ (ಆರ್‌ಟಿಇ) ತಂದಿರುವ ತಿದ್ದುಪಡಿ ಪ್ರಶ್ನಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಈ ಕುರಿತ ಎರಡು ಪಿಐಎಲ್‌ಗಳನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್‌.ನಾರಾಯಣ ಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್‌.ದಿನೇಶ್‌ ಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಾದ-ಪ್ರತಿವಾದ ಆಲಿಕೆ ಪೂರ್ಣಗೊಳಿಸಿತು.

ಪ್ರಕರಣವೇನು?: ‘ನೆರೆಹೊರೆಯಲ್ಲಿ ಸರ್ಕಾರಿ ಅಥವಾ ಅನುದಾನಿತ ಶಾಲೆಗಳಿದ್ದರೆ ಅಂತಹ ಕಡೆ ಆರ್‌ಟಿಇ ಅಡಿ ಖಾಸಗಿ ಶಾಲೆಗಳಲ್ಲಿ ಪ್ರವೇಶಕ್ಕೆ ಅವಕಾಶವಿಲ್ಲ’ ಎಂದು ರಾಜ್ಯ ಸರ್ಕಾರ, ‘ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ನಿಯಮಗಳು-2012’ರ ನಿಯಮ 4ಕ್ಕೆ ತಿದ್ದುಪಡಿ ತಂದಿರುವುದನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT