ಜೋಪಡಿ ನಿವಾಸಿಗಳ ತೆರವಿಗೆ ಹೈಕೋರ್ಟ್‌ ತಡೆ

ಭಾನುವಾರ, ಮೇ 26, 2019
25 °C

ಜೋಪಡಿ ನಿವಾಸಿಗಳ ತೆರವಿಗೆ ಹೈಕೋರ್ಟ್‌ ತಡೆ

Published:
Updated:

ಬೆಂಗಳೂರು: ಮಹದೇವಪುರ ವಲಯದ ತೂಬರಹಳ್ಳಿ ಹಾಗೂ ಕುಂದಲಹಳ್ಳಿ ಬಳಿ ವಾಸಿಸುತ್ತಿರುವ ವಲಸೆ ಕಾರ್ಮಿಕರ ಜೋಪಡಿಗಳನ್ನು ತೆರವುಗೊಳಿಸುವ ಪ್ರಕ್ರಿಯೆಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ಈ ಕುರಿತಂತೆ ಜಮೀನು ಮಾಲೀಕರಾದ ಎಂ. ನಾರಾಯಣರೆಡ್ಡಿ, ಬಿ. ಮುನಿಯಪ್ಪ ಹಾಗೂ ತಾತ್ಕಾಲಿಕ ಜೋಪಡಿಗಳಲ್ಲಿ ವಾಸ ಮಾಡುತ್ತಿರುವ ಪಶ್ಚಿಮ ಬಂಗಾಳದ ಲೈತು ಹಾಗೂ ಮಸೂದ್‌ ಬೀಬಿ ಸೇರಿದಂತೆ 83 ಜನರು ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಸುನಿಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ನಗರಾಭಿವೃದ್ಧಿ ಇಲಾಖೆ, ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯನ್ನು ಪ್ರತಿವಾದಿಗಳನ್ನಾಗಿಸುವಂತೆ ಸೂಚಿಸಿದ ನ್ಯಾಯಪೀಠ, ತಾತ್ಕಾಲಿಕ ಜೋಪಡಿಗಳಲ್ಲಿ ವಾಸ ಮಾಡುತ್ತಿರುವ ಕುಟುಂಬಗಳ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ, ಬಿಬಿಎಂಪಿ, ನಗರಾಭಿವೃದ್ಧಿ ಇಲಾಖೆ ಸೇರಿ ಸಮಗ್ರ ಕ್ರಿಯಾ ಯೋಜನೆ ಸಿದ್ದಪಡಿಸಿ ಅದನ್ನು ಮೂರು ವಾರಗಳಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ನಿರ್ದೇಶನ ನೀಡಿದೆ.

‘ಈ ಪ್ರದೇಶದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿದ್ದಾರೆ’ ಎಂಬ ಆರೋಪದ ಮೇರೆಗೆ 2019ರ ಫೆ.19ರಂದು ಬಿಬಿಎಂಪಿ ಹೂಡಿ ಉಪ ವಲಯದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಜೋಪಡಿ ವಾಸಿಗಳಿಗೆ ನೋಟಿಸ್ ಜಾರಿಗೊಳಿಸಿದ್ದರು. ಮೂರು ದಿನಗಳಲ್ಲಿ ಜಾಗ ತೆರವುಗೊಳಿಸುವಂತೆ ಸೂಚಿಸಿದ್ದರು. ಇದನ್ನು ಪ್ರಶ್ನಿಸಿ ಈ ರಿಟ್‌ ಅರ್ಜಿ ಸಲ್ಲಿಸಲಾಗಿದೆ. ಪ್ರತಿವಾದಿ ಬಿಬಿಎಂಪಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಲಾಗಿದೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !